ವೀರಶೈವ ಲಿಂಗಾಯತ ವಿದ್ಯಾರ್ಥಿಗಳಿಗೆ : ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾ

ವೀರಶೈವ ಲಿಂಗಾಯತ ವಿದ್ಯಾರ್ಥಿಗಳಿಗೆ : ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾ

ವೀರಶೈವ ಲಿಂಗಾಯತ ವಿದ್ಯಾರ್ಥಿಗಳಿಗೆ : ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾ 

ಚಿಂಚೋಳಿ : 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ. 90 ಹಾಗೂ 90ಕ್ಕಿಂತ ಹೆಚ್ಚು ಅಂಕ ಗಳಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕ ಅಧ್ಯಕ್ಷ ಶರಣು ಪಾಟೀಲ್ ಮೋತಕಪಳ್ಳಿ ತಿಳಿಸಿದ್ದಾರೆ.

ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಖಂಡ್ರೆ ಅವರ ಅನುಮತಿಯ ಮೇರೆಗೆ ಪ್ರತಿಭಾ ಪುರಸ್ಕಾರ ಅರ್ಜಿಗಳು ಆಹ್ವಾನಿಸಲಾಗಿದ್ದು, ವೀರಶೈವ ಲಿಂಗಾಯತ ಸಮುದಾಯದ ಆಸಕ್ತ ವಿದ್ಯಾರ್ಥಿಗಳು 2026 ಮೇ 25 ರೊಳಗೆ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. ಆನ್ ಲೈನ್ ನಲ್ಲಿ ಹಾಕಿದ ಅರ್ಜಿಗಳನ್ನು ಮಾತ್ರ ಪರಿಗಣನೆಗೆ ತೆಗೆದುಕೊಳ್ಳಲಾಗುವುದು. ಅಂಚೆ ಅಥವಾ ಕೊರಿಯರ್ ಹಾಗೂ ಖುದ್ದಾಗಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ. ಹೀಗಾಗಿ ವಿದ್ಯಾರ್ಥಿಗಳು www.aivlm.org ವೇಬ್ ಸೈಟ್ ಮುಖಾಂತರ ಅರ್ಜಿ ಹಾಕಿ ನಿಗದಿಪಡಿಸಿದ ದಿನಾಂಕದೊಳಗೆ ಸಲ್ಲಿಸಬೇಕೆಂದು ಅಧ್ಯಕ್ಷ ಶರಣು ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.