ಕಾಂಗ್ರೆಸ್ಸಿಗೆ ಕೇಸರಿ ಭಯ ಆರಂಭ : ಡಾ. ಉಮೇಶ್ ಜಾಧವ್

ಕಾಂಗ್ರೆಸ್ಸಿಗೆ ಕೇಸರಿ ಭಯ ಆರಂಭ : ಡಾ. ಉಮೇಶ್ ಜಾಧವ್

ಕಾಂಗ್ರೆಸ್ಸಿಗೆ ಕೇಸರಿ ಭಯ ಆರಂಭ : ಡಾ. ಉಮೇಶ್ ಜಾಧವ್

ಶಾಲಾ ಸಮವಸ್ತ್ರ ನೀತಿ ವಿರುದ್ಧ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ - ಆಕ್ರೋಶ

ಕಲಬುರಗಿ : ಕಾಂಗ್ರೆಸ್ಸಿಗೆ ಕೇಸರಿ ಕಂಡರೆ ಭಯವಾಗುತ್ತಿದೆ. ಅದಕ್ಕಾಗಿ ರಾಜ್ಯದಲ್ಲಿ ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ನೂತನ ಶಾಲಾ ಸಮವಸ್ತ್ರ ನೀತಿಯನ್ನು ತರಾತುರಿಯಲ್ಲಿ ಕ್ಯಾಬಿನೆಟ್ ನಲ್ಲಿ ತೀರ್ಮಾನಿಸಿ ಜನರ ಆಕ್ರೋಶಕ್ಕೆ ತುತ್ತಾಗಿದೆ ಎಂದು ಮಾಜಿ ಲೋಕಸಭಾ ಸದಸ್ಯರಾದ ಡಾ. ಉಮೇಶ್ ಜಾಧವ್ ಸರಕಾರಕ್ಕೆ ಈ ಮಾರಿ ಹಾಕಿದ್ದಾರೆ. 

    ಕಲಬುರಗಿಯ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಬಿಜೆಪಿ ಯುವ ಮೋರ್ಚಾ ರಾಜ್ಯ ಸರ್ಕಾರದ ಸಮವಸ್ತ್ರ ನೀತಿಯ ವಿರುದ್ಧ ಶನಿವಾರ ನಡೆಸಿದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿ ದಾವಣಗೆರೆಯಲ್ಲಿ ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರು ಕಾಂಗ್ರೆಸ್ಸಿಗೆ ಮತ ಹಾಕಲಿಲ್ಲವೆಂದು ಈಗ ಅವರನ್ನು ಓಲೈಸುವುದಕ್ಕಾಗಿ ತರಾತುರಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವ ನೀತಿಯನ್ನು ಕ್ಯಾಬಿನೆಟ್ ನಲ್ಲಿ ಅಂಗೀಕರಿಸಲಾಗಿದೆ. ಆದರೆ ಬೊಮ್ಮಾಯಿ ಸರಕಾರವು ಜಾರಿ ಮಾಡಿದ ಶಾಲಾ ಸಮವಸ್ತ್ರ ನೀತಿಯನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿದಿದ್ದು ಅದರ ವಿರುದ್ಧ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಲಾಗಿದ್ದು ಅದರಲ್ಲಿ ವಿಭಜನೆಯ ತೀರ್ಪು ಬಂದಿರುವುದರಿಂದ ಮತ್ತೆ ಸಲ್ಲಿಸಲಾಗಿದೆ.ಈ ವಿವಾದವು ಸುಪ್ರೀಂಕೋರ್ಟಿನಲ್ಲಿರುವ ಮಧ್ಯೆ ತರಾತುರಿಯಲ್ಲಿ ರಾಜ್ಯ ಸರಕಾರ ಮುಸ್ಲಿಮರ ಓಲೈಕೆಗಾಗಿ ಈ ಸಮವಸ್ತ್ರ ನೀತಿಯನ್ನು ಜಾರಿ ಮಾಡಿ ವಿದ್ಯಾರ್ಥಿ ಸಮೂಹದಲ್ಲಿ ಕೋಮುವಾದದ ವಿಷಬೀಜ ಬಿತ್ತುವ ಪ್ರಯತ್ನ ಮಾಡುತ್ತಿದೆ. ಸುಪ್ರೀಂ ಕೋರ್ಟ್ ಆದೇಶ ಬರುವವರೆಗೆ ಹೊಸ ಶಾಲಾ ಸಮವಸ್ತ್ರ ನೀತಿ ಅನುಷ್ಠಾನ ಮಾಡಬಾರದು ಎಂದು ಆಗ್ರಹಿಸಿದರು. ಕಾಂಗ್ರೆಸ್ ಗೆ ಕೇಸರಿ ನೋಡಿದರೆ ಭಯ ಹಾಗೂ ನಿದ್ದೆಗೆಡುತ್ತಿದೆ. ಕಾಂಗ್ರೆಸ್ಸಿನ ತುಷ್ಟೀಕರಣ ನೀತಿಯಿಂದಾಗಿ ರಾಷ್ಟ್ರಾದ್ಯಂತ ಕಾಂಗ್ರೆಸ್ ನಾಮಾಶೇಷ ವಾಗುತ್ತಿದ್ದು ಕಾಂಗ್ರೆಸ್ಸಿಗೆ ಅರಿವಿಲ್ಲ. ಇತ್ತೀಚಿನ ಚುನಾವಣೆಗಳು ಇದಕ್ಕೆ ಸಾಕ್ಷಿಯಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಸಬ್ ಕಾ ವಿಶ್ವಾಸ್ ಸಬ್ ಕಾ ಪ್ರಯಾಸ್ ನೀತಿಯೊಂದಿಗೆ ಭಾರತದ 140 ಕೋಟಿ ಜನರ ಪರವಾಗಿ ಕೆಲಸ ಮಾಡುತ್ತಿದ್ದು ಎಲ್ಲೆಡೆ ಬಿಜೆಪಿ ಜಯಭೇರಿ ಬಾರಿಸುತ್ತಿದೆ. ಕಲಬುರಗಿಯಲ್ಲಿ ಕಾಂಗ್ರೆಸ್ ನಾಯಕರು ಭೂಮಿಯನ್ನು ಒತ್ತುವರಿ ಮಾಡಿ ಅಲ್ಪಸಂಖ್ಯಾತರನ್ನು ಶೋಷಣೆ ಮಾಡುತ್ತಿದ್ದಾರೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಬಿಜೆಪಿಯ ಜಿಲ್ಲಾಧ್ಯಕ್ಷರಾದ ಅಶೋಕ್ ಬಗಲಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ವೀರೇಂದ್ರ ಪಾಟೀಲ್ ರಾಯಕೋಡ್ ಬಿಜೆಪಿ ನಗರಾಧ್ಯಕ್ಷ ಚಂದು ಪಾಟೀಲ್ ಮತ್ತಿತರ ಅನೇಕರು ಉಪಸ್ಥಿತರಿದ್ದರು.