ರೇವಣಸಿದ್ದೇಶ್ವರ ದೇವಾಲಯ ಪ್ರಾಧಿಕಾರ ರಚನೆಗೆ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಮುಖ್ಯಮಂತ್ರಿಗೆ ಪತ್ರ
ಶ್ರೀ ಜಗದ್ಗುರು ರೇವಣಸಿದ್ದೇಶ್ವರ ದೇವಾಲಯ ಪ್ರಾಧಿಕಾರ ರಚನೆಗೆ ಕ್ರಮಕೈಗೊಳ್ಳುವಂತೆ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಮುಖ್ಯಮಂತ್ರಿಗೆ ಪತ್ರ ಬರೆದು ಕೋರಿದ್ದಾರೆ.
ಚಿಂಚೋಳಿ : ಶ್ರೀ ಜಗದ್ಗುರು ರೇವಣಸಿದ್ದೇಶ್ವರ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಅಗತ್ಯ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಪತ್ರ ಬರೆದು ಕೋರಿದ್ದಾರೆ.
ಚಿಂಚೋಳಿ ಮತಕ್ಷೇತ್ರದ ವ್ಯಾಪ್ತಿಗೆ ಒಳಪಡುವ ರೇವಗ್ಗಿ (ರಟಕಲ್ ) ಶ್ರೀ ಜಗದ್ಗುರು ರೇವಣಸಿದ್ದೇಶ್ವರ್ ದೇವಾಲಯ ಐತಿಹಾಸಿಕ ಹಿನ್ನಲೆ ಹೊಂದಿರುವ ಸುಪ್ರಸಿದ್ದ ದೇವಸ್ಥಾನವಾಗಿದೆ. ದೇವಸ್ಥಾನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತಾಧಿಗಳು ಹರಿದು ಬರುವ ಹಿನ್ನಲೆಯಲ್ಲಿ ದೇವಸ್ಥಾನದ ವಿವಿಧ ಮೂಲಭೂತ ಸೌಕರ್ಯಗಳನ್ನು ಅನುಷ್ಠಾನಗೊಳಿಸಲು ದೇವಾಲಯ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಡಾ. ಶರಣಕುಮಾರ ಮೋಧಿ, ಕಾರ್ಯದರ್ಶಿ ನಾಗಲಿಂಗಯ್ಯ ಮಠಪತಿ ಅವರು ಮನವಿ ಪತ್ರ ಸಲ್ಲಿಸಿ ಕೋರಿ ಕೊಂಡಿದ್ದಾರೆ.ದೇವಸ್ಥಾನದ ಭಕ್ತಾಧಿಗಳ ಬೆಂಬಲವಾಗಿ ಸಲ್ಲಿಸಿರುವ ಸದರಿಯವರ ಕೋರಿಕೆಯಂತೆ ರೇವಣಸಿದ್ದೇಶ್ವರ್ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲು ಕ್ರಮಕೈಗೊಳ್ಳುವಂತೆ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಕೋರಿರುವುದು ಸಂತಸ ತಂದಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚಿಂಚೋಳಿ ತಾಲೂಕ ಅಧ್ಯಕ್ಷ ಶರಣು ಪಾಟೀಲ್ ಮೋತಕಪಲಳ್ಳಿ ಅವರು ಪ್ರಕಟಣೆ ಮೂಲಕ ಹರ್ಷ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿಗಳು ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ಭರವಸೆ ವ್ಯಕ್ತಪಡಿಸಿದ್ದಾರೆ.
