ರಾಜ್ಯ ಒಕ್ಕಲಿಗರ ಸಂಘದ ವಿಶೇಷ ಸರ್ವ ಸದಸ್ಯರ ಸಭೆಗೆ ಕುಡುಒಕ್ಕಲಿಗ ಸಮುದಾಯಕ್ಕೆ ಆಹ್ವಾನ
ರಾಜ್ಯ ಒಕ್ಕಲಿಗರ ಸಂಘದ ವಿಶೇಷ ಸರ್ವ ಸದಸ್ಯರ ಸಭೆಗೆ ಕುಡುಒಕ್ಕಲಿಗ ಸಮುದಾಯಕ್ಕೆ ಆಹ್ವಾನ
ಕಲಬುರಗಿ: ರಾಜ್ಯ ಒಕ್ಕಲಿಗರ ಸಂಘ(ರಿ), ಬೆಂಗಳೂರು ವತಿಯಿಂದ ಮೇ 31ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರ ಹಾಗೂ ಗಾಯತ್ರಿ ವೃಕ್ಷ ಆವರಣದಲ್ಲಿ ವಿಶೇಷ ಸರ್ವ ಸದಸ್ಯರ ಸಭೆ ಆಯೋಜಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಕುಡುಒಕ್ಕಲಿಗ ಅಭಿವೃದ್ಧಿ ಸೇವಾ ಸಂಘ(ರಿ) ಪ್ರಧಾನ ಕಾರ್ಯದರ್ಶಿ ನಾಗಣ್ಣಗೌಡ ಬಿ. ಪಾಟೀಲ, ಶಂಕರವಾಡಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಲ್ಯಾಣ ಕರ್ನಾಟಕ ಹಾಗೂ ಸುವರ್ಣ ಕರ್ನಾಟಕ ವ್ಯಾಪ್ತಿಯ 14 ರಿಂದ 16 ಜಿಲ್ಲೆಗಳಲ್ಲಿರುವ ಕುಡುಒಕ್ಕಲಿಗ ಸಮುದಾಯದವರು ಈಗಾಗಲೇ ರಾಜ್ಯ ಒಕ್ಕಲಿಗರ ಸಂಘದ ಸದಸ್ಯತ್ವ ಪಡೆದಿರುವ ಎಲ್ಲ ಸದಸ್ಯರು ಸಭೆಗೆ ತಪ್ಪದೇ ಆಗಮಿಸಬೇಕು ಎಂದು ಮನವಿ ಮಾಡಿದ್ದಾರೆ.
ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಬೀದರ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ಬಳ್ಳಾರಿ, ಹೊಸಪೇಟೆ ಸೇರಿದಂತೆ ಸುವರ್ಣ ಕರ್ನಾಟಕ ಭಾಗದ ಬೆಳಗಾವಿ, ವಿಜಯಪುರ, ಗದಗ, ಧಾರವಾಡ, ಬಾಗಲಕೋಟೆ, ಚಿಕ್ಕೋಡಿ ಹಾಗೂ ಮಧ್ಯ ಕರ್ನಾಟಕದ ದಾವಣಗೆರೆ, ಚಿತ್ರದುರ್ಗ ಮತ್ತು ಬೆಂಗಳೂರು ಮಹಾನಗರದಲ್ಲಿ ವಾಸಿಸುವ ಕುಡುಒಕ್ಕಲಿಗ ಸಮುದಾಯದ ಸದಸ್ಯರು ಸಭೆಯಲ್ಲಿ ಭಾಗವಹಿಸಿ ತಮ್ಮ ಪ್ರಾಂತಕ್ಕೆ ಸಂಬಂಧಿಸಿದ ಸಲಹೆಗಳನ್ನು ನೀಡಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದ್ದಾರೆ.
ಸಮುದಾಯದ ಗಣ್ಯರು, ವಿದ್ಯಾರ್ಥಿಗಳು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಕೋರಿದ್ದಾರೆ.
