ಕಲಬುರಗಿಯಲ್ಲಿ ಎಐ, ರೊಬೊಟಿಕ್ಸ್ ಮತ್ತು ಡ್ರೋನ್ ತಂತ್ರಜ್ಞಾನ ತರಬೇತಿ ಕೇಂದ್ರಕ್ಕೆ ಚಾಲನೆ

ಕಲಬುರಗಿಯಲ್ಲಿ ಎಐ, ರೊಬೊಟಿಕ್ಸ್ ಮತ್ತು ಡ್ರೋನ್ ತಂತ್ರಜ್ಞಾನ ತರಬೇತಿ ಕೇಂದ್ರಕ್ಕೆ ಚಾಲನೆ

ಕಲಬುರಗಿಯಲ್ಲಿ ಎಐ, ರೊಬೊಟಿಕ್ಸ್ ಮತ್ತು ಡ್ರೋನ್ ತಂತ್ರಜ್ಞಾನ ತರಬೇತಿ ಕೇಂದ್ರಕ್ಕೆ ಚಾಲನೆ

ಕಲಬುರಗಿ : ಭವಿಷ್ಯದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಉದ್ದೇಶದಿಂದ ಹೊಂಗಿರಣ ಶೈಕ್ಷಣಿಕ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬ್ರೈಟ್ ಆನ್ ಕೋಚಿಂಗ್ ಅಕಾಡೆಮಿ ಹಾಗೂ ರಾಕ್ ಸಫೈರ್ ಪ್ರೈವೇಟ್ ಲಿಮಿಟೆಡ್ ಸಹಯೋಗದಲ್ಲಿ ಎಐ (AI), ಮಷಿನ್ ಲರ್ನಿಂಗ್ (ML), ರೊಬೊಟಿಕ್ಸ್, ಡ್ರೋನ್ ತಂತ್ರಜ್ಞಾನ, ಕೋಡಿಂಗ್, ನಾವೀನ್ಯತೆ ಮತ್ತು ಸಮಸ್ಯೆ ಪರಿಹಾರ ಕೌಶಲ್ಯಗಳ ಸುಧಾರಿತ ತರಬೇತಿ ಕೇಂದ್ರಕ್ಕೆ ಚಾಲನೆ ನೀಡಲಾಯಿತು.

ನಗರದ ರಾಮ ಮಂದಿರ ವೃತ್ತದ ಸಮೀಪದ ಮೌರ್ಯ ಗ್ರ್ಯಾಂಡ್ ಹೋಟೆಲ್‌ನಲ್ಲಿ ನಡೆದ ಉದ್ಘಾಟನಾ ಸಮಾರಂಭವನ್ನು ಕಲಬುರಗಿ ನಗರ ಪೊಲೀಸ್ ಆಯುಕ್ತರಾದ ಡಾ. ಶರಣಪ್ಪ ಎಸ್.ಡಿ. ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂದಿನ ಯುಗದಲ್ಲಿ ಕೃತಕ ಬುದ್ಧಿಮತ್ತೆ, ಡ್ರೋನ್ ಹಾಗೂ ರೊಬೊಟಿಕ್ಸ್ ತಂತ್ರಜ್ಞಾನಗಳು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಮಹತ್ತರ ಬದಲಾವಣೆ ತರುತ್ತಿದ್ದು, ವಿದ್ಯಾರ್ಥಿಗಳು ಇಂತಹ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವುದು ಅಗತ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರೊ. ಲಕ್ಷ್ಮಿ ಮಾಕ, ನಮ್ರತಾ ಎಸ್. ಫಟಾಟೆ, ಆನಂದ್ ಶಾ ಹಾಗೂ ನಾಗೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಉಪೇಂದ್ರ ಕುಮಾರ್ ಗೋಸ್ವಾಮಿ ಉಪಸ್ಥಿತರಿದ್ದರು.

ಸಮಾರಂಭದ ಅಧ್ಯಕ್ಷತೆಯನ್ನು ಬ್ರೈಟ್ ಆನ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ ಸಂಸ್ಥಾಪಕಿ ಹಾಗೂ ಪ್ರಾಂಶುಪಾಲರಾದ ಡಾ. ಕಿರಣ್ ಪಾಟೀಲ್ ವಹಿಸಿದ್ದರು. ಗೌರವ ಅತಿಥಿಗಳಾಗಿ ಶಾಂತಮಲ್ಲಪ್ಪ ಪಾಟೀಲ್, ವೈಜನಾಥ ಪಾಟೀಲ್, ಶಿವಕುಮಾರ ಪರಶಟ್ಟಿ ಹಾಗೂ ಗೌರಮ್ಮ ಪಿ. ಮಾಲಿಪಾಟೀಲ್ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಿಕ್ಷಣ, ಕ್ರೀಡೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳು ಮತ್ತು ಸಾಧಕರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಅಗತ್ಯವಾದ ಜ್ಞಾನ ಮತ್ತು ಕೌಶಲ್ಯಗಳನ್ನು ಒದಗಿಸುವ ಉದ್ದೇಶದಿಂದ ಈ ತರಬೇತಿ ಕಾರ್ಯಕ್ರಮಗಳನ್ನು ಆರಂಭಿಸಲಾಗಿದೆ ಎಂದು ಸಂಸ್ಥೆಯ ಪದಾಧಿಕಾರಿಗಳು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು.