ಆಳಂದ ಗಲಭೆ ಪ್ರಕರಣಗಳ ವಾಪಸಾತಿಗೆ ವಿರೋಧಿಸಿ ಬೃಹತ್ ಪ್ರತಿಭಟನೆ

ಆಳಂದ ಗಲಭೆ ಪ್ರಕರಣಗಳ ವಾಪಸಾತಿಗೆ ವಿರೋಧಿಸಿ ಬೃಹತ್ ಪ್ರತಿಭಟನೆ

ಆಳಂದ ಗಲಭೆ ಪ್ರಕರಣಗಳ ವಾಪಸಾತಿಗೆ ವಿರೋಧಿಸಿ ಬೃಹತ್ ಪ್ರತಿಭಟನೆ

ಕಲಬುರಗಿ : ಆಳಂದ ಗಲಭೆ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿರುವುದನ್ನು ಖಂಡಿಸಿ, ಶಿವಸೇನೆ ಹಾಗೂ ವಿವಿಧ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಕಲಬುರಗಿ ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.

ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರದ ಕ್ರಮವನ್ನು ವಿರೋಧಿಸಿ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಕರಣಗಳ ವಾಪಸಾತಿ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಆಂದೋಲಾ ಶ್ರೀ, ಹರ್ಷಾನಂದ ಗುತ್ತೇದಾರ, ಎಂ.ಎಸ್. ಪಾಟೀಲ ನರಿಬೋಳ, ಮಡಿವಾಳಪ್ಪ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಪ್ರತಿಭಟನಾ ಮೆರವಣಿಗೆಯ ಮೂಲಕ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು.