ರಾಷ್ಟ್ರೀಯ ಗುರುಸೇವಾ ರತ್ನ ಪ್ರಶಸ್ತಿ ಪುರಸ್ಕೃತರಾದ ಬಾಬುರಾವ ಕೋಬಾಳ್
ರಾಷ್ಟ್ರೀಯ ಗುರುಸೇವಾ ರತ್ನ ಪ್ರಶಸ್ತಿ ಪುರಸ್ಕೃತರಾದ ಬಾಬುರಾವ ಕೋಬಾಳ್
ಕಲಬುರಗಿ : ನಗರದ ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಮಂಗಳವಾರ ನಡೆದ ಸಂಗೀತ ರಸಋಷಿ ಪಂಡಿತ ಪುಟ್ಟರಾಜ ಗವಾಯಿ ಸಮಗ್ರ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಯೋಜಿಸಿದ್ದ ಪಂಡಿತ ಪಂಚಾಕ್ಷರಿ ಗವಾಯಿಗಳವರು ಹಾಗೂ ಪಂ. ಪುಟ್ಟರಾಜ ಕವಿ ಗವಾಯಿಗಳವರ ಪುಣ್ಯಸ್ಮರಣೋತ್ಸವ ಅಂಗವಾಗಿ ಸಂಗೀತೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.
ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಹಾಗೂ ಆಕಾಶವಾಣಿ–ದೂರದರ್ಶನದ ಬಿ.ಹೈ. ಗ್ರೇಡ್ ಕಲಾವಿದರಾದ ಬಾಬುರಾವ ಕೋಬಾಳ್ ಅವರಿಗೆ “ರಾಷ್ಟ್ರೀಯ ಗುರುಸೇವಾ ರತ್ನ” ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀಶೈಲ ಜಗದ್ಗುರುಗಳು, ವಿ.ಕೆ. ಸಲಗರದ ಪೂಜ್ಯರು, ಭರತನೂರಿನ ಪೂಜ್ಯರು ಹಾಗೂ ಕರಜಗಿ ಪೂಜ್ಯರು ವಹಿಸಿದ್ದರು. ಕಾಂಗ್ರೆಸ್ ಹಿರಿಯ ಮುಖಂಡ ನೀಲಕಂಠರಾವ್ ಮೂಲಗೆ, ಟ್ರಸ್ಟ್ ಅಧ್ಯಕ್ಷ ಸಿದ್ಧಾರೂಢ ಅವರಳ್ಳಿ ಸೇರಿದಂತೆ ನಾಡಿನ ಅನೇಕ ಕವಿ, ಕಲಾವಿದರು, ಸಾಹಿತಿಗಳು ಮತ್ತು ಕಲಾಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸಂಗೀತ ಮತ್ತು ಸಂಸ್ಕೃತಿಯ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಬಾಬುರಾವ ಕೋಬಾಳ್ ಅವರ ಸಾಧನೆಯನ್ನು ಗಣನೆಗೆ ತೆಗೆದುಕೊಂಡು ಈ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
