ಕಲಬುರಗಿ: ಅಲ್ಲಂಪ್ರಭು ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ
ಕಲಬುರಗಿ: ಅಲ್ಲಂಪ್ರಭು ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ
ಕಲಬುರಗಿ: ರಾಜ್ಯದಲ್ಲಿ ಶೀಘ್ರದಲ್ಲೇ ನಡೆಯಲಿರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಕಲಬುರಗಿ ದಕ್ಷಿಣ
ಮತಕ್ಷೇತ್ರದ ಹಿರಿಯ ಶಾಸಕ ಅಲ್ಲಂಪ್ರಭು ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಕಾರ ವಠಾರ ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಕಲಬುರಗಿ ಜಿಲ್ಲೆಯ ಅನುಭವ ಸಂಪನ್ನ ಹಾಗೂ ಜನಪ್ರಿಯ ನಾಯಕರು ಹಾಗೂ ಶಾಸಕರಾದ ಅಲ್ಲಂಪ್ರಭು ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವುದು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ. ಈ ಬಗ್ಗೆ ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್ ತಕ್ಷಣ ಗಮನ ಹರಿಸಬೇಕೆಂದು ಅವರು ಮನವಿ ಮಾಡಿದರು. ಶಾಸಕ ಅಲ್ಲಂಪ್ರಭು ಪಾಟೀಲ ಅವರು ದೀರ್ಘಕಾಲದಿಂದ ಸಾರ್ವಜನಿಕ ಜೀವನದಲ್ಲಿ ತೊಡಗಿಸಿಕೊಂಡಿದ್ದು, ಜಿಲ್ಲೆಯ ಅಭಿವೃದ್ಧಿಗೆ ಪ್ರಮುಖ ಕೊಡುಗೆ ನೀಡಿದ್ದಾರೆ.ಕಲಬುರಗಿ ದಕ್ಷಿಣ ಮತಕ್ಷೇತ್ರದಲ್ಲಿ ಹಲವು ಮೂಲಭೂತ ಸೌಕರ್ಯ ಅಭಿವೃದ್ದಿ ಕಾಮಗಾರಿಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದಾರೆ ಎಂದರು.
ಶಾಸಕ ಅಲ್ಲಂಪ್ರಭು ಪಾಟೀಲ ಅವರು ಒಂದು ಬಾರಿ ಎಂಎಲ್ಸಿಯಾಗಿ ಆಯ್ಮೆಯಾಗಿದ್ದರು.ನಂತರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ ಅವರ ಆರ್ಶೀವಾದದಿಂದ ಕಾಂಗ್ರೆಸ ಪಕ್ಷದಲ್ಲಿ ಹಗಲಿರುಳು ದುಡಿಯುತ್ತಿದ್ದಾರೆ. ಸುಮಾರು ಐದು ದಶಕಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಹಗಲಿರುಳು ದುಡಿದು ಕಾಂಗ್ರೆಸ್ ಪಕ್ಷದಲ್ಲಿ ಸ್ವಯಂ ಕಾರ್ಯಕರ್ತರಾಗಿ ಸೇವೆ ಮಾಡಿ, ಈಗ ಕಲಬುರಗಿ ದಕ್ಷಿಣ ಮತಕ್ಷೇತ್ರದ ಜನಪ್ರಿಯ ಶಾಸಕರಾಗಿ ದಲಿತರ ಏಳಿಗೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಅವರು,ಪ್ರಸ್ತುತ ಜನರ ಮದ್ಯೆ ಇದ್ದು ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ,ಜನರ ಸಮಸ್ಯೆಗಳಿಗೆ ಮುಕ್ತಿ ಮಾಡುತ್ತಾ ಬಂದಿದ್ದಾರೆ.ಹೀಗಾಗಿ ನೂತನ ಮುಂಬರುವ ಸಚಿವ ಸಂಪುಟ ದರ್ಜೆಯಲ್ಲಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಂಪ್ರಭು ಪಾಟೀಲ ಅವರಿಗೆ ಸೂಕ್ತ ಸ್ಥಾನಮಾನ ನೀಡಿ ಸಚಿವ ಸಂಪುಟ ದರ್ಜೆಯಲ್ಲಿ ಸಚಿವ ಸ್ಥಾನ ಕಲ್ಪಿಸಿಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
