ಶಾಸಕ ಅಲ್ಲಮಪ್ರಭು ಪಾಟೀಲ್‌ ಅವರಿಗೆ ಸಚಿವ ಸ್ಥಾನ ನೀಡಲು ಮಂಜುನಾಥ್ ಬಿರಾದಾರ್ ಆಗ್ರಹ

ಶಾಸಕ ಅಲ್ಲಮಪ್ರಭು ಪಾಟೀಲ್‌ ಅವರಿಗೆ ಸಚಿವ ಸ್ಥಾನ ನೀಡಲು ಮಂಜುನಾಥ್ ಬಿರಾದಾರ್ ಆಗ್ರಹ

ಶಾಸಕ ಅಲ್ಲಮಪ್ರಭು ಪಾಟೀಲ್‌ ಅವರಿಗೆ ಸಚಿವ ಸ್ಥಾನ ನೀಡಲು ಮಂಜುನಾಥ್ ಬಿರಾದಾರ್ ಆಗ್ರಹ 

ಕಲಬುರಗಿ: ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಯುವ ಮುಖಂಡ ಮಂಜುನಾಥ ಬಿರಾದಾರ ಸರಕಾರಕ್ಕೆ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ನೀಡಿದ ಅವರು, ಅಲ್ಲಮಪ್ರಭು ಪಾಟೀಲ್ ಅವರು ಕಳೆದ ಸುಮಾರು 50 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದು, ಮಂಡಲ್ ಪಂಚಾಯತ್, ಗ್ರಾಮ ಪಂಚಾಯತ್ ಹಂತದಿಂದಲೇ ಪಕ್ಷ ಸಂಘಟನೆಗಾಗಿ ದುಡಿಯುತ್ತಿದ್ದಾರೆ ಎಂದು ಹೇಳಿದರು.

ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಜನಸೇವೆಯಲ್ಲಿ ತೊಡಗಿಸಿಕೊಂಡಿರುವ ಅವರು, ಕಲ್ಬುರ್ಗಿ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡಿದ್ದಾರೆ. ಹೀಗಾಗಿ ಅವರ ಅನುಭವ ಮತ್ತು ಸೇವೆಯನ್ನು ಪರಿಗಣಿಸಿ ಸಚಿವ ಸ್ಥಾನ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಅಲ್ಲದೆ, ಹೈದರಾಬಾದ್ ಕರ್ನಾಟಕ ಭಾಗದ ಪ್ರತಿನಿಧಿತ್ವದ ದೃಷ್ಟಿಯಿಂದಲೂ ಅವರಿಗೆ ಸಚಿವ ಸ್ಥಾನ ನೀಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.