ಅತಿ ಹಿಂದುಳಿದ ಮಠಾಧೀಶರ ಮಹಾಸಭೆ ಸ್ವಾಮೀಜಿಗಳನ್ನು ಭೇಟಿ ಮಾಡಿದ ಬಿ.ಎಸ್. ಯಡಿಯೂರಪ್ಪ

ಅತಿ ಹಿಂದುಳಿದ ಮಠಾಧೀಶರ ಮಹಾಸಭೆ ಸ್ವಾಮೀಜಿಗಳನ್ನು ಭೇಟಿ ಮಾಡಿದ ಬಿ.ಎಸ್. ಯಡಿಯೂರಪ್ಪ

ಅತಿ ಹಿಂದುಳಿದ ಮಠಾಧೀಶರ ಮಹಾಸಭೆ ಸ್ವಾಮೀಜಿಗಳನ್ನು ಭೇಟಿ ಮಾಡಿದ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು, ಮೇ 28 : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಗುರುವಾರ ಸಂಜೆ ಬೆಂಗಳೂರಿನಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆಯ ಪರಮ ಪೂಜ್ಯ ಸ್ವಾಮೀಜಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಚಿತ್ರದುರ್ಗದಲ್ಲಿ ನಡೆದ ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಅತಿ ಹಿಂದುಳಿದ ಮಠಾಧೀಶರಿಗೆ ಸೂಕ್ತ ಗೌರವ ಹಾಗೂ ಅವಕಾಶ ಸಿಗದೇ ನಿರ್ಲಕ್ಷ್ಯವಾಗಿರುವ ಕುರಿತು ಸ್ವಾಮೀಜಿಗಳು ಅಸಮಾಧಾನ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ, ಯಡಿಯೂರಪ್ಪ ಅವರು ಖುದ್ದಾಗಿ ಭೇಟಿ ನೀಡಿ ನಡೆದ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿ ಈ ರೀತಿಯ ಯಾವುದೇ ಪ್ರಮಾದಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗುವುದು ಹಾಗೂ ಎಲ್ಲಾ ಮಠಾಧೀಶರಿಗೆ ಸಮಾನ ಗೌರವ ನೀಡುವ ಕಾರ್ಯ ನಡೆಯಲಿದೆ ಎಂದು ಯಡಿಯೂರಪ್ಪ ಅವರು ಸ್ವಾಮೀಜಿಗಳಿಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆಯ ರಾಜ್ಯಾಧ್ಯಕ್ಷರಾದ ಪ್ರಣವಾನಂದ ಸ್ವಾಮಿ ಅವರ ನೇತೃತ್ವದಲ್ಲಿ ಯಡಿಯೂರಪ್ಪ ಅವರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಹಾಸಭೆಯ ಪದಾಧಿಕಾರಿಗಳು, ವಿವಿಧ ಮಠಗಳ ಸ್ವಾಮೀಜಿಗಳು ಹಾಗೂ ಭಕ್ತರು ಉಪಸ್ಥಿತರಿದ್ದರು.

ಮಾಹಿತಿ ನೀಡಿದವರು: ಮಹಾಸಭೆಯ ರಾಜ್ಯ ಉಪಾಧ್ಯಕ್ಷರಾದ ಬಸವ ಮೂರ್ತಿ ಮಾದರ ಚೆನ್ನಯ್ಯ