ಪ್ರಿಯಾಂಕ್ ಖರ್ಗೆಗೆ ಡಿಸಿಎಂ, ಅಲ್ಲಮಪ್ರಭು ಪಾಟೀಲ್‌ಗೆ ಸಚಿವ ಸ್ಥಾನ ನೀಡಲು ಒತ್ತಾಯ

ಪ್ರಿಯಾಂಕ್ ಖರ್ಗೆಗೆ ಡಿಸಿಎಂ, ಅಲ್ಲಮಪ್ರಭು ಪಾಟೀಲ್‌ಗೆ ಸಚಿವ ಸ್ಥಾನ ನೀಡಲು ಒತ್ತಾಯ

ಪ್ರಿಯಾಂಕ್ ಖರ್ಗೆಗೆ ಡಿಸಿಎಂ, ಅಲ್ಲಮಪ್ರಭು ಪಾಟೀಲ್‌ಗೆ ಸಚಿವ ಸ್ಥಾನ ನೀಡಲು ಒತ್ತಾಯ

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಹಾಗೂ ಶಾಸಕ ಅಲ್ಲಮಪ್ರಭು ಪಾಟೀಲ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಕಲ್ಪಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಹಾಗೂ ಪದಾಧಿಕಾರಿಗಳು ಸರ್ಕಾರ ಮತ್ತು ಪಕ್ಷದ ಹೈಕಮಾಂಡ್‌ಗೆ ಆಗ್ರಹಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಉಪಾಧ್ಯಕ್ಷರು ಹಾಗೂ ಪಂಚ್ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾ ಉಪಾಧ್ಯಕ್ಷರಾದ ವಿಜಯಕುಮಾರ ಕಟ್ಟಿಮನಿ ಅವರು ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿ, ಚಿತ್ತಾಪುರ ಕ್ಷೇತ್ರದ ಶಾಸಕರಾದ ಪ್ರಿಯಾಂಕ್ ಖರ್ಗೆ ಅವರು ಕಲ್ಯಾಣ ಕರ್ನಾಟಕ ಭಾಗದ ಅತ್ಯಂತ ದೃಢ ಹಾಗೂ ದಕ್ಷ ನಾಯಕರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರಾಗಿ ಅವರು ಕೈಗೊಂಡಿರುವ ಜನಪರ ಅಭಿವೃದ್ಧಿ ಕಾರ್ಯಗಳು, ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸುವ ಪ್ರಯತ್ನಗಳು ಮತ್ತು ಶೋಷಿತ ವರ್ಗಗಳ ಪರವಾಗಿ ನಡೆಸುತ್ತಿರುವ ಹೋರಾಟಗಳು ರಾಜ್ಯಕ್ಕೆ ಮಾದರಿಯಾಗಿವೆ ಎಂದು ಅವರು ಶ್ಲಾಘಿಸಿದ್ದಾರೆ.

ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ಹಾಗೂ ದಲಿತ ಮತ್ತು ಶೋಷಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದು ಸೂಕ್ತ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಮುಂಬರುವ ದಿನಗಳಲ್ಲಿ ಪಕ್ಷ ಮತ್ತು ಸರ್ಕಾರವನ್ನು ಮತ್ತಷ್ಟು ಬಲಪಡಿಸುವ ದೃಷ್ಟಿಯಿಂದ ಕಾಂಗ್ರೆಸ್ ಹೈಕಮಾಂಡ್ ಶೀಘ್ರ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನೊಂದೆಡೆ, ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕಟ್ಟಿಮನಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಅಲ್ಲಮಪ್ರಭು ಪಾಟೀಲ್ ಅವರು ಕಳೆದ ಸುಮಾರು ೫೦ ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದು, ಮಂಡಲ್ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಹಂತದಿAದಲೇ ಪಕ್ಷ ಸಂಘಟನೆಗಾಗಿ ದುಡಿಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಪಕ್ಷದ ತತ್ವಸಿದ್ಧಾಂತಗಳಿಗೆ ಬದ್ಧರಾಗಿ ಜನಸೇವೆಯಲ್ಲಿ ತೊಡಗಿಸಿಕೊಂಡಿರುವ ಅವರು, ಕಲಬುರಗಿ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡಿದ್ದಾರೆ. ಹೀಗಾಗಿ ಅವರ ಅನುಭವ ಮತ್ತು ಸೇವೆಯನ್ನು ಪರಿಗಣಿಸಿ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.