ಉತ್ತರ ಮತಕ್ಷೇತ್ರದ ಅಭಿವೃದ್ಧಿಗೆ ಶಾಸಕಿ ಖನೀಜ್ ಫಾತೀಮಾ ಕೊಡುಗೆ ಅಪಾರ: ಸಚಿವ ಸ್ಥಾನಕ್ಕೆ ಅಶೋಕ ಎಂ. ನಾಯಕ್ ಆಗ್ರಹ

ಉತ್ತರ ಮತಕ್ಷೇತ್ರದ ಅಭಿವೃದ್ಧಿಗೆ ಶಾಸಕಿ ಖನೀಜ್ ಫಾತೀಮಾ ಕೊಡುಗೆ ಅಪಾರ: ಸಚಿವ ಸ್ಥಾನಕ್ಕೆ ಅಶೋಕ ಎಂ. ನಾಯಕ್ ಆಗ್ರಹ

ಉತ್ತರ ಮತಕ್ಷೇತ್ರದ ಅಭಿವೃದ್ಧಿಗೆ ಶಾಸಕಿ ಖನೀಜ್ ಫಾತೀಮಾ ಕೊಡುಗೆ ಅಪಾರ: ಸಚಿವ ಸ್ಥಾನಕ್ಕೆ ಅಶೋಕ ಎಂ. ನಾಯಕ್ ಆಗ್ರಹ

ಕಲಬುರಗಿ: ಶಾಸಕಿ ಖನೀಜ್ ಫಾತೀಮಾ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಮಾಜಿ ಆಶ್ರಯ ಸಮಿತಿ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡ ಅಶೋಕ ಎಂ. ನಾಯಕ್ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಉತ್ತರ ಮತಕ್ಷೇತ್ರದ ಶಾಸಕರಾಗಿರುವ ಖನೀಜ್ ಫಾತೀಮಾ ಅವರು ಜನಪರ ಕೆಲಸಗಳ ಮೂಲಕ ಕ್ಷೇತ್ರದಲ್ಲಿ ವಿಶೇಷ ಗುರುತಿಸಿಕೊಂಡಿದ್ದಾರೆ. ಕ್ಷೇತ್ರದ ಅಭಿವೃದ್ಧಿ, ಮೂಲಭೂತ ಸೌಕರ್ಯಗಳ ಕಲ್ಪನೆ ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಅವರು ಸದಾ ಮುಂದಿದ್ದಾರೆ ಎಂದು ತಿಳಿಸಿದ್ದಾರೆ.

 ಖನೀಜ್ ಫಾತೀಮಾ ಅವರು ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವುದು ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕಿರಾಗಿರುವ ಅವರು, ಪಕ್ಷ ಸಂಘಟನೆ ಬಲಪಡಿಸುವಲ್ಲಿಯೂ ಮಹತ್ವದ ಪಾತ್ರವಹಿಸಿದ್ದಾರೆ ಎಂದು ಹೇಳಿದ್ದಾರೆ.

ಉತ್ತರ ಮತಕ್ಷೇತ್ರದಲ್ಲಿ ರಸ್ತೆ, ಕುಡಿಯುವ ನೀರು, ಶಿಕ್ಷಣ ಹಾಗೂ ಮಹಿಳಾ ಸಬಲೀಕರಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿರುವ ಖನೀಜ್ ಫಾತೀಮಾ ಅವರಿಗೆ ಸಚಿವ ಸ್ಥಾನ ನೀಡಿದರೆ ಜಿಲ್ಲೆಗೆ ಮತ್ತಷ್ಟು ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯ ಸರ್ಕಾರ ಹಾಗೂ ಪಕ್ಷದ ವರಿಷ್ಠರು ಅವರ ಸೇವೆ ಮತ್ತು ಅನುಭವವನ್ನು ಪರಿಗಣಿಸಿ ಸಚಿವ ಸ್ಥಾನ ನೀಡಬೇಕು ಎಂದು ಅಶೋಕ ಎಂ. ನಾಯಕ್ ಮನವಿ ಮಾಡಿದ್ದಾರೆ.