ಅಲ್ಲಮಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಲು ಶ್ರೀನಿವಾಸ್ ರಾಮನಾಳ್ಕರ್ ಆಗ್ರಹ
ಅಲ್ಲಮಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಲು ಶ್ರೀನಿವಾಸ್ ರಾಮನಾಳ್ಕರ್ ಆಗ್ರಹ
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಮಾಜಿ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾಮನಾಳಕರ್ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಲ್ಲಮಪ್ರಭು ಪಾಟೀಲ್ ಅವರು ಸುಮಾರು ಐದು ದಶಕಗಳ ರಾಜಕೀಯ ಅನುಭವ ಹೊಂದಿರುವ ಹಿರಿಯ ನಾಯಕರು. ಗ್ರಾಮ ಪಂಚಾಯತ್ ಸದಸ್ಯರಿಂದ ಆರಂಭಿಸಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಅಪಾರ ಅನುಭವ ಗಳಿಸಿದ್ದಾರೆ ಎಂದು ತಿಳಿಸಿದ್ದಾರೆ.
ಎಲ್ಲಾ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಅವರು, ಜನಪರ ಮತ್ತು ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಕಲಬುರಗಿ ದಕ್ಷಿಣ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, ಕಾಂಗ್ರೆಸ್ ಶಾಸಕಾಂಗ ಸಮಿತಿಯ ಕಾರ್ಯದರ್ಶಿಯಾಗಿ ಸಹ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಪ್ರಶಂಸಿಸಿದರು.
ಹೀಗಾಗಿ ಅವರ ರಾಜಕೀಯ ಅನುಭವ, ಸಂಘಟನಾ ಸಾಮರ್ಥ್ಯ ಮತ್ತು ಜನಸೇವೆ ಪರಿಗಣಿಸಿ ಸಚಿವ ಸ್ಥಾನ ನೀಡುವಂತೆ ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಮಾಜಿ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾಮನಾಳಕರ್ ರವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮಂಜುನಾಥ್ ಲೆಂಗಟಿ, ಕಾಶಿನಾಥ ಹಾದಿಮನಿ, ಅಶ್ವತಮ್ ಬೆಳಗುಂದಿ, ಮೌನೇಶ್ ಪ್ಯಾಟಿ, ಸಾಗರ್ ಸಾವುರ, ರಾಜಕುಮಾರ್ ಜಿನಕೇರಿ, ರಾಜು ವರವಿ, ಕಿರಣ್ ಕುಮಾರ್ ಚಟ್ನಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
