ಪ್ರಿಯಾಂಕ್‌ಗೆ ಡಿಸಿಎಂ ಹಾಗೂ ಅಲ್ಲಂಪ್ರಭು ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ

ಪ್ರಿಯಾಂಕ್‌ಗೆ ಡಿಸಿಎಂ ಹಾಗೂ ಅಲ್ಲಂಪ್ರಭು ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ

ಪ್ರಿಯಾಂಕ್‌ಗೆ ಡಿಸಿಎಂ ಹಾಗೂ ಅಲ್ಲಂಪ್ರಭು ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ

ಕಲಬುರಗಿ:ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಹಾಗೂ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಂಪ್ರಭು ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಯೂಥ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿಶಾಲ ಆರ್ ಸುರಪೂರಕರ್ ಅವರು ಕಾಂಗ್ರೆಸ್ ಪಕ್ಷದ ವರಿಷ್ಠರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು‌ ಈಗಾಗಲೇ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಿದ್ದು, ಸಚಿವ ಸಂಪುಟ ಪುನರ್ ರಚನೆ ಮಾಡುವ ಸಂದರ್ಭದಲ್ಲಿ ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಮಾಡಬೇಕು ಹಾಗೂ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಂಪ್ರಭು ಪಾಟೀಲ ಅವರು ಬೇರು ಮಟ್ಟದಿಂದ ಹಂತಹಂತವಾಗಿ ರಾಜಕೀಯ ಮೆಟ್ಟಿಲು ಏರಿರುವ ಅಲ್ಲಂಪ್ರಭು ಪಾಟೀಲರು ಸುದೀರ್ಘ ರಾಜಕೀಯ ಅನುಭವ ಇರುವವರು. ಕಳೆದ 3 ವರ್ಷಗಳ ಕಾಂಗ್ರೆಸ್ ಸರ್ಕಾರದಲ್ಲಿ ಅಲ್ಲಂಪ್ರಭು ಪಾಟೀಲ ಅವರಿಗೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಹುದ್ದೆ ನೀಡಿದ್ದು ಬಿಟ್ಟರೆ ನಿಗಮ, ಮಂಡಳಿ ಇತ್ಯಾದಿ ಯಾವುದೇ ಪ್ರಮುಖ ಸ್ಥಾನಮಾನ ಸಿಕ್ಕಿಲ್ಲ. ಅವರ ಹಿರಿತನ ಪರಿಗಣಿಸಿ ಅಲ್ಲಂಪ್ರಭು ಪಾಟೀಲರಿಗೆ ಹೊಸ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.