ಬಿ.ಆರ್. ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಯುವ ಕಾಂಗ್ರೆಸ್ ಆಳಂದ ಬ್ಲಾಕ್, ಅಧ್ಯಕ್ಷ ಪ್ರಕಾಶ ಜವಳಿ ಮನವಿ

ಬಿ.ಆರ್. ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಯುವ ಕಾಂಗ್ರೆಸ್ ಆಳಂದ ಬ್ಲಾಕ್, ಅಧ್ಯಕ್ಷ ಪ್ರಕಾಶ ಜವಳಿ ಮನವಿ

ಬಿ.ಆರ್. ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಯುವ ಕಾಂಗ್ರೆಸ್ ಆಳಂದ ಬ್ಲಾಕ್, ಅಧ್ಯಕ್ಷ ಪ್ರಕಾಶ ಜವಳಿ ಮನವಿ

ಆಳಂದ: ಕಲ್ಯಾಣ ಕರ್ನಾಟಕದ ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ಆಳಂದ ಕ್ಷೇತ್ರದ ಶಾಸಕರಾದ  

 ಬಿ.ಆರ್. ಪಾಟೀಲ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ಆಳಂದ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ ಜವಳಿ ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ವರಿಷ್ಠರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಲೋಹಿಯಾ ಚಿಂತನೆಗಳಿಗೆ ಬದ್ಧರಾಗಿರುವ ಬಿ.ಆರ್. ಪಾಟೀಲ್ ಅವರು ನಾಲ್ಕು ಬಾರಿ ಶಾಸಕರಾಗಿ, ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಹಾಗೂ ಉಪಸಭಾಪತಿಯಾಗಿ ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದು, ತಮ್ಮ ನೇರತೆ, ನಿಷ್ಠೆ ಮತ್ತು ಅನುಭವಸಂಪನ್ನ ರಾಜಕಾರಣದ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ ಎಂದು ತಿಳಿಸಿದ್ದಾರೆ.

ದೇಶದಲ್ಲೇ ಮೊದಲ ಬಾರಿಗೆ “ವೋಟ್ ಚೋರಿ” ಹಗರಣವನ್ನು ಸಾಕ್ಷ್ಯಾಧಾರಗಳೊಂದಿಗೆ ಬಹಿರಂಗಪಡಿಸಿ ಅದರ ವಿರುದ್ಧ ಕಾನೂನು ಹೋರಾಟ ನಡೆಸಿದ ಧೈರ್ಯಶಾಲಿ ನಾಯಕತ್ವವೂ ಬಿ.ಆರ್. ಪಾಟೀಲ್ ಅವರದ್ದಾಗಿದೆ ಎಂದು ಅವರು ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ, ಶೋಷಿತರ ಪರ ಹೋರಾಟ ಹಾಗೂ ಸಾಮಾಜಿಕ ನ್ಯಾಯದ ಮೌಲ್ಯಗಳ ಪರವಾಗಿ ನಿರಂತರವಾಗಿ ಧ್ವನಿಯಾಗಿರುವ ಬಿ.ಆರ್. ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡುವುದು ಈ ಭಾಗದ ಜನತೆಗೆ ಹಾಗೂ ಕಾಂಗ್ರೆಸ್ ಪಕ್ಷದ ತತ್ವ-ಸಿದ್ಧಾಂತಗಳಿಗೆ ಸಲ್ಲಿಸುವ ಗೌರವವಾಗಲಿದೆ ಎಂದು ಪ್ರಕಾಶ ಜವಳಿ ಅಭಿಪ್ರಾಯಪಟ್ಟಿದ್ದಾರೆ.

ಇದಲ್ಲದೆ, ನೀರಾವರಿ ಕ್ಷೇತ್ರದಲ್ಲಿ “ಸಿರಪುರ ಮಾದರಿ ಯೋಜನೆ”ಯನ್ನು ಯಶಸ್ವಿಯಾಗಿ ಜಾರಿಗೆ ತಂದ ದೂರದೃಷ್ಟಿಯ ನಾಯಕರಾಗಿರುವ ಬಿ.ಆರ್. ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಪಕ್ಷದ ಬಲವರ್ಧನೆ ಹಾಗೂ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನ ದೊರೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಆದ್ದರಿಂದ, ರಾಜ್ಯ ಸಚಿವ ಸಂಪುಟದಲ್ಲಿ ಬಿ.ಆರ್. ಪಾಟೀಲ್ ಅವರಿಗೆ ಸೂಕ್ತ ಸ್ಥಾನಮಾನ ನೀಡುವ ಮೂಲಕ ಅವರ ಅನುಭವ ಮತ್ತು ಸೇವೆಯನ್ನು ರಾಜ್ಯದ ಅಭಿವೃದ್ಧಿಗೆ ಬಳಸಿಕೊಳ್ಳಬೇಕೆಂದು ಯುವ ಕಾಂಗ್ರೆಸ್ ಪರವಾಗಿ ಪ್ರಕಾಶ ಜವಳಿ ಆಗ್ರಹಿಸಿದ್ದಾರೆ.