ಪ್ರಿಯಾಂಕ್ ಖರ್ಗೆಗೆ ಡಿಸಿಎಂ, ಅಲ್ಲಂಪ್ರಭು ಪಾಟೀಲ್‌ಗೆ ಸಚಿವ ಸ್ಥಾನ ನೀಡಲು ಅಸ್ಲಾಂ ಸಿಂದಗಿ ಆಗ್ರಹ
ಪ್ರಿಯಾಂಕ್ ಖರ್ಗೆಗೆ ಡಿಸಿಎಂ, ಅಲ್ಲಂಪ್ರಭು ಪಾಟೀಲ್‌ಗೆ ಸಚಿವ ಸ್ಥಾನ ನೀಡಲು ಅಸ್ಲಾಂ ಸಿಂದಗಿ ಆಗ್ರಹ
ಕಲಬುರಗಿ: ರಾಜ್ಯ ಸಚಿವ ಸಂಪುಟದಲ್ಲಿ ಜಿಲ್ಲೆಯ ನಾಯಕರಿಗೆ ಸೂಕ್ತ ಸ್ಥಾನಮಾನ ನೀಡಬೇಕೆಂದು ಕಲಬುರಗಿ ದಕ್ಷಿಣ ಗ್ರಾಮೀಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಸ್ಲಾಂ ಸಿಂದಗಿ ಅವರು ಆಗ್ರಹಿಸಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ಅವರು ರಾಜ್ಯ ಮಟ್ಟದಲ್ಲಿ ಪರಿಣಾಮಕಾರಿ ನಾಯಕತ್ವ ನೀಡುತ್ತಿದ್ದು, ಯುವಕರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ಹಾಗೆಯೇ ಹಿರಿಯ ನಾಯಕ ಹಾಗೂ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಂಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಜಿಲ್ಲೆಯ ಜನರ ಆಶಯವನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠೆಯಿಂದ ದುಡಿದ ನಾಯಕರಿಗೆ ಸೂಕ್ತ ಗೌರವ ಹಾಗೂ ಜವಾಬ್ದಾರಿ ನೀಡುವ ವಿಶ್ವಾಸ ಇದೆ ಎಂದು ಅಸ್ಲಾಂ ಸಿಂದಗಿ ತಿಳಿಸಿದ್ದಾರೆ.
