ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ದಲಿತ, ಲಿಂಗಾಯತ ಸಮಾಜಕ್ಕೆ ಉಪಮುಖ್ಯಮಂತ್ರಿ ಸ್ಥಾನ ಒದಗಿಸಿ : ಜಿ.ಪಂ ಮಾಜಿ ಅಧ್ಯಕ್ಷ ದೀಪಕನಾಗ ಪುಣ್ಯಶೆಟ್ಟಿ ಆಗ್ರಹ

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ದಲಿತ, ಲಿಂಗಾಯತ ಸಮಾಜಕ್ಕೆ ಉಪಮುಖ್ಯಮಂತ್ರಿ ಸ್ಥಾನ ಒದಗಿಸಿ : ಜಿ.ಪಂ ಮಾಜಿ ಅಧ್ಯಕ್ಷ ದೀಪಕನಾಗ ಪುಣ್ಯಶೆಟ್ಟಿ ಆಗ್ರಹ

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ದಲಿತ, ಲಿಂಗಾಯತ ಸಮಾಜಕ್ಕೆ ಉಪಮುಖ್ಯಮಂತ್ರಿ ಸ್ಥಾನ ಒದಗಿಸಿ : ಜಿ.ಪಂ ಮಾಜಿ ಅಧ್ಯಕ್ಷ ದೀಪಕನಾಗ ಪುಣ್ಯಶೆಟ್ಟಿ ಆಗ್ರಹ 

ಚಿಂಚೋಳಿ: ರಚನೆ ಆಗಲಿರುವ ನೂತನ ಸಚಿವ ಸಂಪುಟದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಯುವಕರ ಕಣ್ಮಣಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ವೀರಶೈವ ಲಿಂಗಾಯತ ಸಮಾಜದ ರಾಷ್ಟ್ರೀಯ ಅಧ್ಯಕ್ಷ ಸಚಿವ ಈಶ್ವರ ಖಂಡ್ರೆ ಅವರಿಗೆ ಕಾಂಗ್ರೆಸ್ ಪಕ್ಷದ ವರಿಷ್ಠರು ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಬೇಕೆಂದು ಮಾಜಿ ಜಿ.ಪಂ ಅಧ್ಯಕ್ಷ ದೀಪಕನಾಗ ಪುಣ್ಯಶೆಟ್ಟಿ ಅವರು ಮನವಿ ಮಾಡಿ, ಆಗ್ರಹಿಸಿದ್ದಾರೆ.

ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದವರು, ಹಿಂದುಳಿದ ಹಣೆಪಟ್ಟಿ ಪಡೆದಿರುವ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ಹೊಂದಲು ದಲಿತ ಕೋಟಾದಡಿ ಪ್ರೀಯಾಂಕ್ ಖರ್ಗೆ ಹಾಗೂ ಲಿಂಗಾಯತ ಕೋಟಾದಡಿ ಈಶ್ವರ ಖಂಡ್ರೆ ಅವರನ್ನು ಉಪಮುಖ್ಯಮಂತ್ರಿ ಸ್ಥಾನ ಹಾಗೂ ಹಿಂದುಳಿದ ವರ್ಗ ಕೋಟಾದಡಿ ಜೇವರ್ಗಿ ಶಾಸಕ ಡಾ. ಅಜೇಯ ಧರ್ಮಸಿಂಗ್ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನಮಾನ ಮತ್ತು ಪಕ್ಷದ ಸಂಘಟನೆ ಬಲವರ್ಧನೆಗೆ ಸಚಿವ ಡಾ.ಶರಣಪ್ರಕಾಶ ಪಾಟೀಲರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು. ಪ್ರೀಯಾಂಕ್ ಖರ್ಗೆ ಮತ್ತು ಈಶ್ವರ ಖಂಡ್ರೆ ಅವರು ತಮದೇ ಆದ ವಾಕ್ ಚಾತುರ್ಯದಿಂದ ದೂರದೃಷ್ಟಿ ಅಭಿವೃದ್ಧಿ ಕಾರ್ಯಗಳಿಂದ ಜನಮನಣೆ ಪಡೆದಿರುವ ನಾಯಕರಾಗಿದ್ದಾರೆ. ಈ ಇಬ್ಬರು ನಾಯಕರಿಗೆ ಉಪಮುಖ್ಯಮಂತ್ರಿ ಆಗುವ ಎಲ್ಲಾ ಅಹರ್ತೆ ಹೊಂದಿದ್ದು ಪಕ್ಷದ ವರಿಷ್ಠರು ಆಶೀರ್ವಾದಿಸಬೇಕು. ಇಬ್ಬರು ನಾಯಕರು ಉಪಮುಖ್ಯಮಂತ್ರಿ ಆಗುವುದರಿಂದ ಹಿಂದುಳಿದ ಹಣೆಪಟ್ಟಿ ಹೊಂದಿರುವ ಕಲ್ಯಾಣ ಕರ್ನಾಕ ಭಾಗ ಸಮಗ್ರ ಅಭಿವೃದ್ಧಿ ಕಾರ್ಯ ಚುರುಕುಗೊಳುವ ವಿಶ್ವಾಸವಿದೆ. ಇನ್ನೂ ಮಾಜಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್ ಅವರು ಈ ಭಾಗದ ಕಲ್ಯಾಣಕ್ಕಾಗಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಹೋಗಿದ್ದಾರೆ. ಅವರ ಅಭಿವೃದ್ಧಿ ಸೇವೆಯನ್ನು ಗಮನದಲ್ಲಿಟ್ಟುಕೊಂಡು ಮೂರು ಬಾರಿ ಜೇವರ್ಗಿ ಶಾಸಕರಾಗಿ ಸೇವೆಸಲ್ಲಿಸುತ್ತಿರುವ ಕೆಕೆಆರ್ ಡಿಬಿ ಅಧ್ಯಕ್ಷ ಪುತ್ರ ಡಾ. ಅಜೇಯಸಿಂಗ್ ಅವರಿಗೆ ಹಿಂದುಳಿದ ವರ್ಗ ಕೋಟಾದಡಿ ಸಂಪುಟ ದರ್ಜೆ ಸಚಿವ ಸ್ಥಾನಮಾನ ನೀಡಬೇಕು. ಅಲ್ಲದೇ ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷ ಆಡಳಿತಕ್ಕೆ ಬರಲು ಮುಖ್ಯ ಪಾತ್ರ ವಹಿಸಿರುವ ಕಲ್ಯಾಣ ಕರ್ನಾಟಕ ಭಾಗಕ್ಕೆ ಪಕ್ಷದ ಸಂಘಟನೆಗೆ ಅನುಭವ ಹೊಂದಿರುವ ಸಚಿವ ಡಾ. ಶರಣಪ್ರಕಾಶ ಪಾಟೀಲರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕೆಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ವರಿಷ್ಠ ರಾಹುಲ ಗಾಂಧಿ, ರದೀಪಸಿಂಗ್ ಸುರ್ಜೆವಾಲ್ ಮತ್ತು ನೂತನ ಮುಖ್ಯಮಂತ್ರಿ ಸ್ಥಾನ ಅಲಂಕರಿಸಲಿರುವ ಡಿ. ಕೆ ಶಿವಕುಮಾರ್ ಅವರಲ್ಲಿ ದೀಪನಾಗ್ ಪುಣ್ಯಶೆಟ್ಟಿ ಅವರು ಮನವಿ ಮಾಡಿದ್ದಾರೆ.