ಪ್ರಿಯಾಂಕ ಖರ್ಗೆ ಅವರಿಗೆ ಡಿಸಿಎಂ ಸ್ಥಾನ ನೀಡಲು ಮನವಿ :..ಡಾ.ಎಂಎ ರಶೀದ.

ಪ್ರಿಯಾಂಕ ಖರ್ಗೆ ಅವರಿಗೆ ಡಿಸಿಎಂ ಸ್ಥಾನ ನೀಡಲು ಮನವಿ :..ಡಾ.ಎಂಎ ರಶೀದ.

ಪ್ರಿಯಾಂಕ ಖರ್ಗೆ ಅವರಿಗೆ ಡಿಸಿಎಂ ಸ್ಥಾನ ನೀಡಲು ಮನವಿ :..ಡಾ.ಎಂಎ ರಶೀದ.

 ನಾಗರಾಜ್ ದಂಡಾವತಿ ವರದಿ ಶಹಾಬಾದ : - ಕರ್ನಾಟಕ ರಾಜ್ಯದಲ್ಲಿ ಡಿ.ಕೆ.ಶಿವುಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಚಿತ್ತಾಪುರ ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಾ.ಎಂಎ ರಶೀದ ಅವರು ಕಾಂಗ್ರೆಸ್‌ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ.

ಅವರು ನಗರದ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಅಧಿವೇಶನದಲ್ಲಿ ಪ್ರತಿ ಪಕ್ಷಗಳ ನಾಯಕರಿಗೆ ಖಡಕ್ ಆಗಿ ಅಂಕಿ ಸಂಖ್ಯೆಗಳ ಸಮೇತ ಸ್ವಷ್ಟ ಉತ್ತರ ನೀಡುವ ಸಮರ್ಥರು, ಅಧ್ಯಯನ ಶೀಲರು ಹಾಗೂ ಅನುಭವಿಗಳಾಗಿದ್ದಾರೆ,

ಎಲ್ಲ ಜಾತಿ ಜನಾಂಗದವರನ್ನು ಸಮಾನವಾಗಿ ತೆಗೆದುಕೊಂಡು ಹೋಗುವ ಹಾಗೂ ದಿನ ದಲಿತರ, ಬಡವರ, ರೈತರ, ಕಾರ್ಮಿಕರ, ವಿದ್ಯಾರ್ಥಿಗಳ, ಮಹಿಳೆಯರ ಪರ ಅಪಾರ ಕಾಳಜಿಯುಳ್ಳವರಾಗಿದ್ದು, ಎಲ್ಲ ವರ್ಗಗಳ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮವಹಿಸುತ್ತಿದ್ದಾರೆ, ಹೀಗಾಗಿ ಪ್ರಿಯಾಂಕ್ ಖರ್ಗೆ ಅವರಿಗೆ ಉಪ ಮುಖ್ಯ ಮಂತ್ರಿಯಾಗುವ ಎಲ್ಲ ಅರ್ಹತೆ ಇದೆ ಹಾಗೂ ರಾಜ್ಯವನ್ನು ಮುನ್ನೆಡೆಸಿಕೊಂಡು ಹೋಗುವ ಸಾಮರ್ಥ್ಯ ಇದೆ ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಹೊಂದಲು ಇವರನ ಡಿಸಿಎಂ ಮಾಡಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಹ್ಮದ ಬಾಕ್ರುದ್ದೀನ, ಶರಣು ಪಗಲಾಪುರ, ವಸಂತ ಕಾಂಬಳೆ, ಫಜಲ ಪಟೇಲ ಇದ್ದರು.