ಈಶ್ವರ ಖಂಡ್ರೆ ಅವರಿಗೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲು ಕಾಂಗ್ರೆಸ್ ವರಿಷ್ಠರಿಗೆ ಮನವಿ
ಈಶ್ವರ ಖಂಡ್ರೆ ಅವರಿಗೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲು ಕಾಂಗ್ರೆಸ್ ವರಿಷ್ಠರಿಗೆ ಮನವಿ
ಕಲಬುರಗಿ: ಅಖಿಲ ಕರ್ನಾಟಕ ಶ್ರೀ ಈಶ್ವರ ಖಂಡ್ರೆ ಸಾಬ್ ಅಭಿಮಾನಿಗಳ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷ ದಶವಂತ್ ಬಿ. ಕಣಮಸಕರ ಅವರ ನೇತೃತ್ವದಲ್ಲಿ ನಗರದ ಜಗತ್ ವೃತ್ತದಲ್ಲಿರುವ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ವಿಶ್ವಗುರು ಬಸವಣ್ಣನವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ.
ದಶವಂತ್ ಬಿ. ಕಣಮಸಕರ ಮಾತನಾಡಿ ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಚಿವ ಈಶ್ವರ ಖಂಡ್ರೆ ಅವರಿಗೆ ಉಪ ಮುಖ್ಯಮಂತ್ರಿ (ಡಿಸಿಎಂ) ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ಮನವಿ ಮಾಡಿದರು.
ಈಶ್ವರ ಖಂಡ್ರೆ ಅವರು ಪಕ್ಷ ಸಂಘಟನೆ ಹಾಗೂ ಸಾರ್ವಜನಿಕ ಸೇವೆಯಲ್ಲಿ ಸಲ್ಲಿಸಿರುವ ಕೊಡುಗೆ ಅಪಾರವಾಗಿದೆ. ಅವರ ಆಡಳಿತಾತ್ಮಕ ಅನುಭವ ಮತ್ತು ಜನಪರ ಕಾರ್ಯಗಳನ್ನು ಪರಿಗಣಿಸಿ ರಾಜ್ಯದ ಉನ್ನತ ಜವಾಬ್ದಾರಿಗಳನ್ನು ನೀಡಬೇಕು ಎಂದು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಮಹದೇವ್ ಮಡ್ಡಿ, ಸಮರ್ಥ ಕುಂಬಾರ, ಹುಸೇನಿ, ಬಾಬಾ ಯಾದವ್, ಇರ್ಫಾನ್ ಪಟೇಲ್, ರವಿ ಹಲ್ಕೆ, ಕೃಷ್ಣ ಯಾದವ್, ಮಲ್ಲಿಕಾರ್ಜುನ, ಶರಣು ಕೊಡ್ಲಿ, ಸುರೇಶ್ ಯಾದವ್, ಭೀಮ್ ಯಾದವ್, ಮಂಜು ಕಡಗಂಚಿ, ಮಲ್ಲಿಕಾರ್ಜುನ ಸುಲ್ತಾನಪುರ, ಆಕಾಶ್ ಕೊಪ್ಪಿನ್, ಚಂದ್ರಶೇಖರ ಗಾಯಕ್ವಾಡ್, ಶೇಖರ್ ವಾಗ್ದರ್ಗಿ, ಶಿವಕುಮಾರ್ ಪಾಟೀಲ್ ಸೇರಿದಂತೆ ಹಲವಾರು ಅಭಿಮಾನಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
