ದರ್ಶನಾಪುರ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ
ದರ್ಶನಾಪುರ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ
ಕಲಬುರ್ಗಿ,ಮುಂಬರುವ ಸಂಪುಟಪುನಾರಚನೆಯಲ್ಲಿ ಮಾಜಿ ಸಚಿವ ಶ್ರೀಶರಣಬಸಪ್ಪಗೌಡ ದರ್ಶನಾಪುರ ಅವರಿಗೆ ಉನ್ನತಮಂತ್ರಿ ಸ್ಥಾನ ನೀಡಬೇಕು ಎಂದು ವೀರಶೆವ ಲಿಂಗಾಯತ ರೆಡ್ಡಿ ಸಮಾಜ ಯುವ ಮುಖಂಡರಾದ ಮಹೇಶ ರೆಡ್ಡಿ ಮತ್ತು ಶಾಂತರೆಡ್ಡಿ ಪೆಟಶೀರೂರ ಅವರು ಎಐಸಿಸಿ ಅಧ್ಯಕ್ಷರಾದ ಶ್ರೀಮಲ್ಲಿಕಾರ್ಜುನಖರ್ಗೆ ಸಾಹೇಬರಿಗೆ ಮತ್ತು ಶ್ರೀರಾಹುಲಗಾಂಧಿ ಅವರಿಗೆ ಮನವಿ ಮಾಡಿದ್ದಾರೆ..ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರದಲ್ಲಿ ಕಳೆದ ಮೂರು ವರ್ಷಗಳಿಂದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾಗಿ ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದಾರೆ. ಶಹಾಪುರ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವುದರ ಜತೆಗೆ ಸರ್ವ ಸಮುದಾಯದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗಿರಿ ಜಿಲ್ಲೆಯ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ.
ಸಚಿವ ದರ್ಶನಾಪುರ ಅವರು ಶಾಸಕರಾಗಿ, ಸಚಿವರಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರಿಗೆ ಆಡಳಿತ ಮತ್ತು ಅಭಿವೃದ್ಧಿ ವಿಷಯದಲ್ಲಿ ಸಾಕಷ್ಟು ಅನುಭವವಿದೆ. ಸಿಎಂ ಸಿದ್ದರಾಮಯ್ಯ ಅವರು ನೀಡಿದ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಿದ್ದಾರೆ.
ತಮ್ಮ ನಲವತ್ತು ವರ್ಷದ ರಾಜಕೀಯ ಇತಿಹಾಸದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಮಾಡಿ ಈ ಭಾಗದ ಬಡಜನರ ನೋವು,ನಲುವಿಗೆ ಸ್ಪಂದಿಸಿದ್ದಾರೆ.
ಹಿರಿಯ ಅನುಭವಿ ರಾಜಕಾರಣಿಯಾಗಿರುವ ಶರಣಬಸಪಗೌಡ ದರ್ಶನಾಪುರ ಅವರಿಗೆ ನೂತನ ಸಂಪುಟದಲ್ಲಿ ಉನ್ನತಮಂತ್ರಿ ಸ್ಥಾನ ನೀಡಿದರೆ ಈ ಭಾಗದ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ. ಮತ್ತು ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳ ಅಭಿವೃದ್ಧಿ ಕಾರ್ಯಗಳಿಗೆ ಪೂರಕವಾಗಲಿದೆ. ಇದೇ ಅಂಶವನ್ನು ಇಟ್ಟುಕೊಂಡು ದರ್ಶನಾಪುರ ಅವರಿಗೆ ಉನ್ನತ ಹುದ್ದೆ ಖಾತೆಯನ್ನು ವಹಿಸಲು ಕಾಂಗ್ರೆಸ್ ಹೈಕಮಾಂಡ್ ಒಲವು ತೋರಬೇಕು ಎಂದು ವೀರಶೆವ ಲಿಂಗಾಯತ ರೆಡ್ಡಿ ಸಮಾಜ ಯುವ ಮುಖಂಡರಾದ ಮಹೇಶ ರೆಡ್ಡಿ ಮತ್ತು ಶಾಂತರೆಡ್ಡಿ ಪೆಟಶೀರೂರ ಅವರು ಮತ್ತೊಮ್ಮೆ ಅವರಿಗೆ ಮನವಿ ಮಾಡಿದ್ದಾರೆ.
