ಶ್ರೀ ಬಸವೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನರೇಗಲ್ಲನಲ್ಲಿ ಇಂದು ಶಾಲಾ ಪ್ರಾರಂಭೋತ್ಸವ
ಶ್ರೀ ಬಸವೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನರೇಗಲ್ಲನಲ್ಲಿ ಇಂದು ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ನಡೆಸಲಾಯಿತು...ಶಾಲೆಯನ್ನು ತಳಿರು ತೋರಣಗಳಿಂದ ಶೃಂಗರಿಸಲಾಗಿತ್ತು ..ಮಕ್ಕಳಿಗೆ ಶಿಕ್ಷಕಿಯರು ಪುಷ್ಪಾರ್ಚನೆ ಮಾಡುವುದರೊಂದಿಗೆ ಶಾಲೆಗೆ ಬರಮಾಡಿಕೊಳ್ಳಲಾಯಿತು...ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಎಸ್ ಎ ವಿ ವಿ ಪಿ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಯುತ ರವೀಂದ್ರನಾಥ ದೊಡ್ಡಮೇಟಿಯವರು ಹಾಗೂ ಶ್ರೀಯುತ ಮಲಕಾಜಪ್ಪ ಮೆಣಸಗಿಯವರು ಮಕ್ಕಳಿಗೆ ಸಿಹಿ ಹಂಚುವುದರ ಮೂಲಕ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು..ಶಾಲೆಯ ಮುಖ್ಯೋಪಾಧ್ಯಾಯನಿಯರಾದ ಶ್ರೀಮತಿ ಬಿ ಜಿ ಶಿರ್ಸಿಯವರು ಸೇರಿದಂತೆ ಎಲ್ಲ ಸಿಬ್ಬಂದಿ ಹಾಗೂ ಮಕ್ಕಳು, ಪಾಲಕರು ಹಾಜರಿದ್ದರು.
