ಡಿಕೆಶಿ ಪ್ರಮಾಣವಚನ ಡಾ.ಪ್ರಣವಾನಂದ ಶ್ರೀಗೆ ಆಹ್ವಾನ
ಡಿಕೆಶಿ ಪ್ರಮಾಣವಚನ ಡಾ.ಪ್ರಣವಾನಂದ ಶ್ರೀಗೆ ಆಹ್ವಾನ
ಕಲಬುರಗಿ: ಇಂದು ಲೋಕಭವನದ ಗಾಜಿನ ಮನೆಯಲ್ಲಿ ನಡೆಯುವ ಶ್ರೀ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಪದಗ್ರಹಣ ಮಾಡುವ ಕಾರ್ಯಕ್ರಮಕ್ಕೆ
ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿಗಳು ಹಾಗೂ ಅತಿ ಹಿಂದುಳಿದ ಮಠಾಧೀಶರ ಮಹಾಸಭಾ ರಾಜ್ಯಾಧ್ಯಕ್ಷರಾದ
ಶ್ರೀ ಶ್ರೀ ಶ್ರೀ ಡಾ.ಪ್ರಣವಾನಂದ ಸ್ವಾಮೀಜಿ ಯವರಿಗೆ ನಿನ್ನೆ ಸಂಜೆ
ಮುಖ್ಯಮಂತ್ರಿಗಳ ಕಚೇರಿಯಿಂದ ವಿಶೇಷ ಆಹ್ವಾನ ಪತ್ರಿಕೆಯನ್ನು ತಲುಪಿಸಿದರು.
ಡಿಕೆಶಿ ಅವರು ಮುಖ್ಯಮಂತ್ರಿ ಆಗಬೇಕೆಂದು ಕಳೆದ ಆರು ತಿಂಗಳಿಂದ ಸತತವಾಗಿ ಒತ್ತಾಯಿಸುತ್ತಿದ್ದ ಸ್ವಾಮೀಜಿಯವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ ಡಿಕೆಶಿ ಪರವಾಗಿ ಡಾ. ಪ್ರಣವಾನಂದ ಶ್ರೀಗಳು ವಿಶೇಷ ಪ್ರಾರ್ಥನೆ ಹೋಮ ಪೂಜೆ ಕೂಡ ನೆರವೇರಿಸಿದ್ದನ್ನು ಇಲ್ಲಿ ಸ್ಮರಿಸಬಹುದು ಎಂದು ಶಕ್ತಿ ಪೀಠದ ಮಾಧ್ಯಮ ಸಂಚಾಲಕರಾದ ಡಾ.ಕ
ಸದಾನಂದ ಪೆರ್ಲ ತಿಳಿಸಿದ್ದಾರೆ
