ಪರಿಸರ ಸಂರಕ್ಷಣೆ ನಮ್ಮ ನಿಮ್ಮೆಲ್ಲರ ಹೊಣೆ - ಕರಣ ಸುಬೇದಾರ

ಪರಿಸರ ಸಂರಕ್ಷಣೆ ನಮ್ಮ ನಿಮ್ಮೆಲ್ಲರ ಹೊಣೆ - ಕರಣ ಸುಬೇದಾರ

ಪರಿಸರ ಸಂರಕ್ಷಣೆ ನಮ್ಮ ನಿಮ್ಮೆಲ್ಲರ ಹೊಣೆ - ಕರಣ ಸುಬೇದಾರ

ಶಹಪುರ : ಪರಿಸರ ಸಂರಕ್ಷಣೆ ಅಂದರೆ ಕೇವಲ ಸರ್ಕಾರದ ಜವಾಬ್ದಾರಿಯಲ್ಲ ಅದು ನಮ್ಮ ನಿಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಯುವ ಮುಖಂಡ ಕರಣ ಸುಬೇದಾರ ಹೇಳಿದರು.

ತಾಲೂಕಿನ ಸಗರ ಗ್ರಾಮದ ಸುಬೇದಾರ ವಿದ್ಯಾಲಯದಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯಲ್ಲಿ ಭಾಗವಹಿಸಿ ಸಸಿ ನೆಟ್ಟು ಮಕ್ಕಳಲ್ಲಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಿ ಮಾತನಾಡಿದರು.

ಪರಿಸರ ದಿನಾಚರಣೆಯಂದು ಕಾಟಾಚಾರಕ್ಕೆ ಗಿಡ ನೆಟ್ಟು ಕೈ ತೊಳೆದು ಕೊಂಡರೆ ಸಾಲದು ಅದನ್ನು ಸಂರಕ್ಷಣೆ ಹಾಗೂ ಪೋಷಣೆ ಪಾಲನೆ ಮಾಡುವುದು ಪ್ರತಿಯೊಬ್ಬರ ಆಧ್ಯ ಕರ್ತವ್ಯವಾಗಿದೆ ಎಂದು ನುಡಿದರು.

ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು,ಉತ್ತಮ ವಾತಾವರಣ ನಿರ್ಮಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ,ಆದ್ದರಿಂದ ಈ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಡಾ.ದತ್ತರಾಜ್ ಕುಲಕರ್ಣಿ, ಗುರುರಾಜ್ ಕಾಮಾ,ಸೇರಿದಂತೆ ಪೋಷಕರು ಹಾಗೂ ಬೋಧಕ ಸಿಬ್ಬಂದಿಗಳು ಉಪಸ್ಥಿತರಿದ್ದರು.