ಗದಗದ KVSR ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಗದಗದ KVSR ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಗದಗದ KVSR ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಲ್ಯಾಣ ಕಹಳೆ ಗದಗ: "ಪರಿಸರವನ್ನು ರಕ್ಷಿಸುವುದು ಕೇವಲ ಒಂದು ದಿನದ ಆಚರಣೆಯಾಗದೆ, ನಮ್ಮ ದೈನಂದಿನ ಜೀವನದ ಭಾಗವಾಗಬೇಕು. ಪ್ರತಿಯೊಬ್ಬರೂ ಒಂದು ಸಸಿಯನ್ನು ನೆಟ್ಟು ಪೋಷಿಸುವ ಸಂಕಲ್ಪ ಮಾಡಬೇಕು."

ಸ್ಥಳೀಯ ಕೆ .ವಿ.ಎಸ್.ಆರ್. ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹಸಿರು ಆಂದೋಲನ ಹಾಗೂ ಸಸಿ ನೆಡುವ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿತ್ತು.

       ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಪ್ರಾಚಾರ್ಯರಾದ ಶ್ರೀ ಎಸ್. ಐ. ಚವಡಿ ಅವರು ಶಾಲೆಯ ಆವರಣದಲ್ಲಿ ಗಿಡಕ್ಕೆ ನೀರೆರೆಯುವ ಮೂಲಕ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

     ಈ ಸಂದರ್ಭದಲ್ಲಿ ಶಾಲೆಯ ಮುಖ್ಯಶಿಕ್ಷಕರಾದ ಪಿ ಟಿ ಬಿಸನಳ್ಳಿ ಶಿಕ್ಷಕರಾದ ಎಂ ಕೆ ಬೇವಿನಕಟ್ಟಿ. ದೀಪಾ ಎಂ. ಎಸ್ ಎಸ್ ಮುಧೋಳ ಎಸ್ ಕೆ ಬಸಾಪುರ  ಬೋಧಕೇತರ ಸಿಬ್ಬಂದಿಬಿ ಎನ್ ಕಮ್ಮಾರ ಆಯ್ ಎಂ ಕುರ್ತಕೋಟಿ  ಉಪಸ್ಥಿತರಿದ್ದರು.

      ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಹಾಗೂ ಇತರ ವಿದ್ಯಾರ್ಥಿನಿಯರು ಸಮವಸ್ತ್ರ ಧರಿಸಿ ಉತ್ಸಾಹದಿಂದ ಭಾಗವಹಿಸಿ, ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಿದರು.

ವರದಿ ಶ್ರೀ ಹುಚ್ಚೀರಪ್ಪ ವೀರಪ್ಪ ಈಟಿ ಕಲ್ಯಾಣ ಕಹಳೆ ಗದಗ