ವಿನೇಶಾ ಫೋಗಟ್ ಮತ್ತು ಬಜರಂಗ್ ಪುನಿಯಾ ಕಾಂಗ್ರೆಸ್ಗೆ ಸೇರ್ಪಡೆ
ವಿನೇಶಾ ಫೋಗಟ್ ಮತ್ತು ಬಜರಂಗ್ ಪುನಿಯಾ ಕಾಂಗ್ರೆಸ್ಗೆ ಸೇರ್ಪಡೆ
ಕುಸ್ತಿಪಟುಗಳಾದ ವಿನೇಶಾ ಫೋಗಟ್ ಮತ್ತು ಬಜರಂಗ್ ಪುನಿಯಾ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ.
ಬುಧವಾರ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದರು.
ಇಂದು ಫೋಗಟ್ ಮತ್ತು ಪುನಿಯಾ ಇಬ್ಬರೂ ನವದೆಹಲಿಯ ಪ್ರಧಾನ ಕಚೇರಿಯಲ್ಲಿ ಔಪಚಾರಿಕವಾಗಿ ಪಕ್ಷಕ್ಕೆ ಸೇರುವ ಮೊದಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ರೈಲ್ವೆ ಕೆಲಸಕ್ಕೆ ರಾಜೀನಾಮೆ
ಕಾಂಗ್ರೆಸ್ ಪಕ್ಷಕ್ಕೆ ಸೇರುವ ಮೊದಲು, ತಮ್ಮ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಫೋಗಟ್ ಉತ್ತರ ರೈಲ್ವೆಯ ವಿಶೇಷ ಕರ್ತವ್ಯದ ಅಧಿಕಾರಿ (ಒಎಸ್ಡಿ) ಹುದ್ದೆಗೆ ರಾಜೀನಾಮೆ ನೀಡಿದರು.
“ಭಾರತೀಯ ರೈಲ್ವೆಗೆ ಸೇವೆ ಸಲ್ಲಿಸುವುದು ನನ್ನ ಜೀವನದಲ್ಲಿ ಸ್ಮರಣೀಯದಿನ ಮತ್ತು ನನ್ನ ರಾಜೀನಾಮೆಯನ್ನು ಭಾರತೀಯ ರೈಲ್ವೆಯ ಸಮರ್ಥ ಅಧಿಕಾರಿಗಳಿಗೆ ಸಲ್ಲಿಸಿದ್ದೇನೆ, ರೈಲ್ವೆ ನನಗೆ ನೀಡಿದ ಈ ಅವಕಾಶಕ್ಕಾಗಿ ನಾನು ಭಾರತೀಯ ರೈಲ್ವೆ ಕುಟುಂಬಕ್ಕೆ ಯಾವಾಗಲೂ ಕೃತಜ್ಞನಾಗಿರುತ್ತೇನೆ” ಎಂದು ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.