ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ - ವಸಂತಗೌಡ.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ - ವಸಂತಗೌಡ.
ಶಹಪುರ: ಪರಿಸರ ದಿನಾಚರಣೆಯ ಅಂಗವಾಗಿ ಸಸಿ ನೆಟ್ಟು ಕೈ ತೊಳೆದು ಕೊಂಡರೆ ಸಾಲದು,ಅದರ ಪೋಷಣೆ ಪಾಲನೆಯ ಜೊತೆಗೆ ಅದರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆಯೆಂದು ನಿರ್ದೇಶಕರಾದ ವಸಂತಗೌಡ ಹೇಳಿದರು.
ತಾಲೂಕಿನ ಅರಳಹಳ್ಳಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಒಂದು ವೇಳೆ ಪರಿಸರ ಸಂರಕ್ಷಣೆ ಮಾಡದಿದ್ದರೆ ಮುಂದಾಗುವ ದುಷ್ಪರಿಣಾಮಗಳು ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು,ಊರಿಗೊಂದು ವನ,ಮಗುವಿಗೊಂದು ಮರ,ಎಂಬ ಘೋಷವಾಕ್ಯದೊಂದಿಗೆ ಪರಿಸರ ಕಾಪಾಡುವಂತೆ ವಿದ್ಯಾರ್ಥಿಗಳಿಗೆ ಪ್ರೇರೇಪಿಸಿದರು.
ಸಂಯೋಜಕರಾದ ಮಲ್ಲಿಕಾರ್ಜುನ್ ಮಾತನಾಡಿ ಗ್ರಾಮಾಭಿವೃದ್ಧಿ ಯೋಜನೆಗಳ ಕಾರ್ಯ ಶ್ಲಾಘನೀಯವಾದದ್ದು , ಇದರ ಪ್ರಯೋಜನೆಗಳನ್ನು ನಾವು ನೀವೆಲ್ಲರೂ ಸದುಪಯೋಗಪಡಿಸಿಕೊಳ್ಳೋಣ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶಿಕ್ಷಕರು ಮತ್ತು ಮೇಲ್ವಿಚಾರಕರಾದ ರಾಜೇಶ್ವರಿ ಕೃಷಿ ಮೇಲ್ವಿಚಾರಕ ಮಹಾಲಿಂಗ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
