ಸಂಪುಟ ವಿಸ್ತರಣೆಯಲ್ಲಿ ಲಂಬಾಣಿ ಸಮುದಾಯಕ್ಕೆ ಮಂತ್ರಿ ಗಿರಿ ಭಾಗ್ಯ ಕೊಡಿ ಆಗ್ರಹ
ಸಂಪುಟ ವಿಸ್ತರಣೆಯಲ್ಲಿ ಲಂಬಾಣಿ ಸಮುದಾಯಕ್ಕೆ ಮಂತ್ರಿ ಗಿರಿ ಭಾಗ್ಯ ಕೊಡಿ ಆಗ್ರಹ
ಕಲಬುರಗಿ : ನೂತನ ಸಿಎಂ ಡಿ.ಕೆ ಶಿವಕುಮಾರ್ ಅವರು ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಲಂಬಾಣಿ ಸಮುದಾಯಕ್ಕೂ ಸಚಿವ ಸ್ಥಾನದ ಭಾಗ್ಯ ನೀಡಬೇಕು ಎಂದು ಕಲಬುರಗಿ ಜಿಲ್ಲಾ ಬಂಜಾರಾ (ಲಂಬಾಣಿ) ಸೇವಾ ಸಂಘ ಹಾಗೂ ಕರ್ನಾಟಕ ಪ್ರದೇಶ ಬಂಜಾರಾ (ಲಂಬಾಣಿ) ಸೇವಾ ಸಂಘದ ಕಾರ್ಯದರ್ಶಿ ವಿನೋದ್ ಚೌಹಾಣ್ ಒತ್ತಾಯಿಸಿದ್ದಾರೆ.
ಸಾಮಾಜಿಕವಾಗಿ ಅತಿ ಹಿಂದುಳಿದ ಮತ್ತು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಲಂಬಾಣಿ ಸಮುದಾಯದ ಶಾಸಕರಿಗೆ ಸಚಿವ ಸ್ಥಾನವನ್ನು ನೀಡಿ ನ್ಯಾಯ ಕಲ್ಪಿಸಬೇಕು. ವಿಧಾನಸಭಾ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರನ್ನು ಸಚಿವ ಸ್ಥಾನಕ್ಕೆ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ರಾಜ್ಯದಲ್ಲಿ ಅತ್ಯಂತ ಗಣನೀಯ ಪ್ರಮಾಣದಲ್ಲಿರುವ ಸಮುದಾಯವನ್ನು ಸಚಿವ ಸ್ಥಾನ ನೀಡದೆ ಕಡೆಗಣಿಸಲಾಗಿದೆ. ಅದಕ್ಕಾಗಿ ಈ ಬಾರಿ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅವಕಾಶ ನೀಡಬೇಕು ಇಲ್ಲವಾದಲ್ಲಿ ಲಂಬಾಣಿ ಸಮುದಾಯ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದೆ ಹಾಗೂ ಬೀದಿಗಿಳಿದು ಹೋರಾಟ ಮಾಡುವುದು ನಿಶ್ಚಿತ ಎಂದುಮಾಧ್ಯಮ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.
