ಅಪ್ಪುಗೌಡರ ವಿರುದ್ಧ ಎಫ್ಐಆರ್ ರದ್ದುಪಡಿಸಲು ಒತ್ತಾಯ
ಅಪ್ಪುಗೌಡರ ವಿರುದ್ಧ ಎಫ್ಐಆರ್ ರದ್ದುಪಡಿಸಲು ಒತ್ತಾಯ
ಕಲಬುರಗಿ: ದತ್ತಾತ್ರೇಯ ಪಾಟೀಲ್ ರೇವೂರ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಹಿಂಪಡೆದು, ಸಾಮಾಜಿಕ ಜಾಲತಾಣಗಳಲ್ಲಿ ಅವರ ವಿರುದ್ಧ ತೇಜೋವಧೆ ಮಾಡಿದ 18 ಜನರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ಮುಖಂಡ ಪ್ರದೀಪ ಬಾಚನಳ್ಳಿಕರ್ ಅವರು ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ಆಳಂದ ಪ್ರಕರಣವನ್ನು ಸರ್ಕಾರವೇ ದಾಖಲಿಸಿ ನಂತರ ವಾಪಸ್ ಪಡೆದಿರುವುದು ಆಶ್ಚರ್ಯಕರ ಬೆಳವಣಿಗೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಜೂನ್ 1ರಂದು ನಡೆದ ಪ್ರತಿಭಟನೆಯಲ್ಲಿ ರೇವೂರ ಅವರು ಕೇವಲ ಹಿಂದಿನ ರಾಜಕೀಯ ಬೆಳವಣಿಗೆ ಉಲ್ಲೇಖಿಸಿ ಮಾತನಾಡಿದರು.ಆದರೆ ಅವರ ಭಾಷಣವನ್ನು ಉದ್ದೇಶ ಪೂರ್ವಕವಾಗಿ ತಪ್ಪಾಗಿ ಅರ್ಥೈಸಿ, ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನದ ಭಾಗವಾಗಿ ಸುಳ್ಳು ಆರೋಪ ಮಾಡಿ ಎಪ್ಐಆರ್ ದಾಖಲಿಸಲಾಗಿದೆ ಎಂದು ಅವರು ಕಿಡಿಕಾಡಿದರು.
ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರ ರಾಜಕೀಯ ಜೀವನಕ್ಕೆ ಕಪ್ಪು ಮಸಿ ಬಳಿಯುವ ಉದ್ದೇಶದಿಂದ ಎಫ್‌ಐಆರ್ ದಾಖಲಿಸಲಾಗಿದೆ. ಎಫ್‌ಐಆರ್ ಹಿಂದೆ ಕಾಣದ ಕೈಗಳಿವೆ. ಕೂಡಲೇ ಎಫ್ಐಆರ್ ಹಿಂಪಡೆದು, ನಿಂದಿಸುತ್ತಿರುವವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.
