ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡರ ಜನ್ಮದಿನ: ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ
ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡರ ಜನ್ಮದಿನ: ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ
ಆಳಂದ: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ ಟಿ.ಎ. ನಾರಾಯಣ ಗೌಡರ 60ನೇ ವರ್ಷದ ಜನ್ಮದಿನದ ಅಂಗವಾಗಿ ಆಳಂದ ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಆಳಂದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಭೀಮ್ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರವೇ ಆಳಂದ ತಾಲೂಕು ಅಧ್ಯಕ್ಷರಾದ ಶ್ರೀ ಪ್ರವೀಣ್ ಪಿ. ಮೊದಲೆ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಪೆನ್ನು ಹಾಗೂ ನೋಟ್‌ಬುಕ್‌ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕರವೇ ಉಪಾಧ್ಯಕ್ಷರಾದ ಶ್ರೀ ಮಹೇಶ್ ವಾರಿಕ, ಯುವ ಘಟಕದ ಅಧ್ಯಕ್ಷರಾದ ಶ್ರೀ ಮದಾರ ಶೇಖ್, ಕರವೇ ಸಂಚಾಲಕರಾದ ಶ್ರೀ ಮಲ್ಲಿಕಾರ್ಜುನ ಶ್ರೀಂಗೆರಿ, ಕರುನಾಡ ವಿಜಯಸೇನೆ ಅಧ್ಯಕ್ಷರಾದ ಶ್ರೀ ಗುರು ಬಂಗರಗೆ, ಸಹ ಕಾರ್ಯದರ್ಶಿ ಶ್ರೀ ಆಕಾಶ ಜಿಡಗಾ, ನಗರ ಅಧ್ಯಕ್ಷರಾದ ಶ್ರೀ ಕರಣ್ ಢೋಲೆ, ಶ್ರೀ ನಾಗರಾಜ ಪಟ್ಟಣಶೆಟ್ಟಿ, ತಾಲೂಕು ಪದಾಧಿಕಾರಿಗಳಾದ ಶ್ರೀ ಜೈಭೀಮ್ ಹರಸೂರೆ, ಅಕ್ಷಯ್ ಸಿ.ಎಂ. ಸೇರಿದಂತೆ ಕರವೇ ಪದಾಧಿಕಾರಿಗಳು, ಸದಸ್ಯರು ಹಾಗೂ ಶಾಲೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಕುರಿತು ಮಾತನಾಡಿದ ಕರವೇ ತಾಲೂಕು ಅಧ್ಯಕ್ಷ ಶ್ರೀ ಪ್ರವೀಣ್ ಪಿ. ಮೊದಲೆ ಅವರು, "ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದು ಸಮಾಜದ ಅಭಿವೃದ್ಧಿಗೆ ಅತ್ಯಂತ ಅಗತ್ಯವಾಗಿದೆ. ವಿದ್ಯಾರ್ಥಿಗಳಿಗೆ ಅಗತ್ಯವಾದ ಶೈಕ್ಷಣಿಕ ಸಾಮಗ್ರಿಗಳನ್ನು ನೀಡುವ ಮೂಲಕ ರಾಜ್ಯಾಧ್ಯಕ್ಷರ ಜನ್ಮದಿನವನ್ನು ಸೇವಾ ಕಾರ್ಯದ ಮೂಲಕ ಆಚರಿಸಿರುವುದು ಸಂತಸ ತಂದಿದೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಮಾಜಕ್ಕೆ ಮಾದರಿಯಾಗಬೇಕು" ಎಂದು ಹೇಳಿದರು.
ವರದಿ: ಡಾ. ಅವಿನಾಶ ಎಸ್. ದೇವನೂರ
