ಸಾತ್ವಿಕ ಬದುಕಿಗೆ ಧರ್ಮ ಜೀವನ ಕುರಿತು ಉಪನ್ಯಾಸ ಕಾರ್ಯಕ್ರಮ
ಸಾತ್ವಿಕ ಬದುಕಿಗೆ ಧರ್ಮ ಜೀವನ ಕುರಿತು ಉಪನ್ಯಾಸ ಕಾರ್ಯಕ್ರಮ
ಕಲಬುರಗಿ, ಜೂ. 12:ನಗರದ ಅಡ್ವೋಕೇಟ್ ಕಾಲನಿಯ ನೂತನ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಶನಿವಾರ (ಜೂನ್ 13) ಸಂಜೆ 6.30 ಗಂಟೆಗೆ "ಸಾತ್ವಿಕ ಬದುಕಿಗೆ ಧರ್ಮ ಜೀವನ" ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಕಲಬುರಗಿ ಆಕಾಶವಾಣಿ ಕೇಂದ್ರದ ನಿವೃತ್ತ ಕಾರ್ಯಕ್ರಮ ಮುಖ್ಯಸ್ಥರಾದ ಡಾ. ಸದಾನಂದ ಪೆರ್ಲಾ ಅವರು ಉಪನ್ಯಾಸ ನೀಡಲಿದ್ದು, ಧರ್ಮ, ಮೌಲ್ಯಗಳು ಹಾಗೂ ಸಾತ್ವಿಕ ಜೀವನದ ಮಹತ್ವದ ಕುರಿತು ಮಾತನಾಡಲಿದ್ದಾರೆ.
ಈ ಉಪನ್ಯಾಸ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅದರ ಪ್ರಯೋಜನ ಪಡೆಯುವಂತೆ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಮಂಜುನಾಥ ಜೇವರ್ಗಿ,ಕಾರ್ಯದರ್ಶಿ ಹಾಗೂ ಸಮಿತಿಯ ಸದಸ್ಯರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
