ಔರಾದ(ಬಿ) ಚರ್ಚ್ ಕಾಮಗಾರಿ ಪರಿಶೀಲಿಸಿದ ಶಾಸಕ ಪ್ರಭು ಚವ್ಹಾಣ ಬಾಕಿ ಕಾಮಗಾರಿಗಳಿಗೆ ಹೆಚ್ಚುವರಿ 1 ಕೋಟಿಗೆ ಪ್ರಸ್ತಾವನೆ
ಔರಾದ(ಬಿ) ಚರ್ಚ್ ಕಾಮಗಾರಿ ಪರಿಶೀಲಿಸಿದ ಶಾಸಕ ಪ್ರಭು ಚವ್ಹಾಣ
ಬಾಕಿ ಕಾಮಗಾರಿಗಳಿಗೆ ಹೆಚ್ಚುವರಿ 1 ಕೋಟಿಗೆ ಪ್ರಸ್ತಾವನೆ
--ಔರಾದ(ಬಿ) ಪಟ್ಟಣದಲ್ಲಿ ಚರ್ಚ್ನ ಬಾಕಿ ಉಳಿದ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ ಒಂದು ಕೋಟಿಯ ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದೆಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ತಿಳಿಸಿದರು.
ಔರಾದ(ಬಿ) ಪಟ್ಟಣದ ನೂತನ ಚರ್ಚ್ ನಿರ್ಮಾಣ ಸ್ಥಳಕ್ಕೆ ಶಾಸಕರು ಜೂನ್ 12ರಂದು ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು. ಈ ವೇಳೆ ಮಾತನಾಡಿ, ಔರಾದ(ಬಿ) ಪಟ್ಟಣದಲ್ಲಿ ಸುಂದರ ಮತ್ತು ಭವ್ಯವಾದ ಚರ್ಚ್ ನಿರ್ಮಿಸಬೇಕೆಂಬ ಉದ್ದೇಶದಿಂದ ವಿವಿಧ ಯೋಜನೆಗಳಡಿ ಸುಮಾರು 80 ಲಕ್ಷ ಅನುದಾನ ನೀಡಿದ್ದೇನೆ. ಇಲ್ಲಿವರೆಗೆ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಬಹಳಷ್ಟು ವಿಳಂಬವಾಗಿದೆ. ಇನ್ನಾದರೂ ವಿಳಂಬ ಮಾಡುವುದು ಬೇಡ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಚರ್ಚ್ ಕಾಮಗಾರಿ ಪೂರ್ಣಗೊಳ್ಳಲು ಇನ್ನು ಏನೇನು ಕೆಲಸಗಳಾಗಬೇಕು ಎನ್ನುವ ಬಗ್ಗೆ ಸ್ಪಷ್ಟ ವಿವರಣೆ ಕೊಡಿ ಕೂಡಲೇ 1 ಕೋಟಿ ಹೆಚ್ಚುವರಿ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಿ ಸರ್ಕಾರದ ಮೇಲೆ ಒತ್ತಡ ಹಾಕುತ್ತೇನೆ. ಇಲಾಖೆಯಿಂದಲೂ ಪ್ರಸ್ತಾವನೆ ಕಳುಹಿಸಿ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ನಾನು ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಹಿಂದೆ ಸಚಿವನಾಗಿದ್ದಾಗ ಕ್ಷೇತ್ರದಲ್ಲಿರುವ ಎಲ್ಲ ಚರ್ಚ್ಗಳ ನವೀಕರಣ, ಸುಧಾರಣೆಗೆ ಅನುದಾನ ನೀಡಿದ್ದೇನೆ. ಔರಾದ ಚರ್ಚ್ ಕಾಮಗಾರಿಯ ಕುರಿತು ಬಹಳಷ್ಟು ಬೇಡಿಕೆಗಳಿದ್ದವು. ಸುಂದರವಾದ ಸ್ಥಳದ ಅಭಿವೃದ್ಧಿಗೆ ನಾನು ಕೂಡ ಕಾಳಜಿ ವಹಿಸಿದ್ದೇನೆ. ಅನುದಾನ ಸೇರಿದಂತೆ ಅಗತ್ಯ ಸಹಕಾರ ನೀಡುತ್ತಿದ್ದೇನೆ. ಕೆಲವರು ಜನರಿಗೆ ತಪ್ಪು ಮಾಹಿತಿ ನೀಡಿ ವಿನಾಕಾರಣ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇವುಗಳಿಗೆ ಕಿವಿಗೊಡದೇ ಅಭಿವೃದ್ಧಿ ಕೆಲಸಗಳಿಗೆ ಸಹಕರಿಸಬೇಕು ಎಂದು ಹೇಳಿದರು.
ಚರ್ಚ್ ಆವರಣದಲ್ಲಿ ಸುಂದರ ಗಿಡಗಳನ್ನು ನೆಟ್ಟು ಪೋಷಿಸಬೇಕು. ನನ್ನಿಂದ ಏನೇನು ಕೆಲಸಗಳಾಗಬೇಕು ಎಂಬುದರ ಬಗ್ಗೆ ಪಟ್ಟಿ ಮಾಡಿಕೊಟ್ಟಲ್ಲಿ ಹಂತ ಹಂತವಾಗಿ ಎಲ್ಲ ಕೆಲಸಗಳನ್ನು ಮಾಡಿಕೊಡುತ್ತೇನೆ ಎಂದು ಇದೇ ವೇಳೆ ತಿಳಿಸಿದರು. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು ಚರ್ಚ್ ಸಮಿತಿಯ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ರಸ್ತೆಯ ಒತ್ತುವರಿ ತೆರವು: ಔರಾದ-ಉದಗೀರ ಹಳೆಯ ರಸ್ತೆಯ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಶಾಸಕ ಪ್ರಭು ಚವ್ಹಾಣ ಅವರ ಉಪಸ್ಥಿತಿಯಲ್ಲಿ ಆರಂಭಿಸಲಾಯಿತು. ಎರಡು ತಿಂಗಳ ಹಿಂದೆಯೇ ಸ್ವಯಂ ಪ್ರೇರಿತವಾಗಿ ಒತ್ತುವರಿ ತೆರವುಗೊಳಿಸುವಂತೆ ಸಾರ್ವಜನಿಕರಿಂದ ಸೂಚನೆ ನೀಡಲಾಗಿತ್ತು. ಆದರೆ ಇಲ್ಲಿವರೆಗೆ ತೆರವು ಮಾಡದ ಸ್ಥಳಗಳನ್ನು ಜೆಸಿಬಿ ಮುಖಾಂತರ ತೆರವುಗೊಳಿಸಲಾಯಿತು.
ಔರಾದ(ಬಿ) ಹಾಗೂ ಉದಗೀರ್‌ಗೆ ಸಂಪರ್ಕಿಸುವ ಮೂಲಕ ರಸ್ತೆ ಇದಾಗಿದೆ. ಸಾರ್ವಜನಿಕರು ರಸ್ತೆ ಒತ್ತುವರಿ ಮಾಡಿಕೊಂಡಿದ್ದರಿAದ ರಸ್ತೆ ಚಿಕ್ಕದಾಗಿ ವಾಹನಗಳು ಓಡಾಡಲು ಸಾಧ್ಯವಾಗದಂತಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಕೂಡಲೇ ಒತ್ತುವರಿಯಾದ ರಸ್ತೆಯನ್ನು ತೆರವುಗೊಳಿಸಿ ಕಾಮಗಾರಿ ಆರಂಭಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ತಹಸೀಲ್ದಾರರಾದ ಮಹೇಶ ಪಾಟೀಲ, ಪುರಸಭೆ ಮುಖ್ಯಾಕಾರಿ ರವಿ ಸುಕುಮಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
