ಕರವೇ(ಕಾವಲುಪಡೆ) ಗೆ ವಿಜಯಪ್ರಭು ನೇಮಕ
ಕರವೇ(ಕಾವಲುಪಡೆ) ಗೆ ವಿಜಯಪ್ರಭು ನೇಮಕ
ಕಲಬುರಗಿ: ಕರ್ನಾಟಕ ರಕ್ಷಣಾ ವೇದಿಕೆ (ಕಾವಲುಪಡೆ) ಸಂಘಟನೆಯ ಕಲಬುರಗಿ ಜಿಲ್ಲಾ ಉಪಾಧ್ಯಕ್ಷರನ್ನಾಗಿ ವಿಜಯಪ್ರಭು ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷರಾದ ಮಂಜುನಾಥ ನಾಲವಾರಕರ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,
ಕನ್ನಡ ನಾಡು,ನುಡಿ,ನೆಲ, ಜಲ,ಕಲೆ ಸಂಸ್ಕೃತಿ ಹಾಗೂ ಪರಂಪರೆಯ ಸಂರಕ್ಷಣೆ ಮತ್ತು ಬೆಳವಣಿಗೆಗಾಗಿ ಹಗಲಿರುಳೆನ್ನದೆ ಪ್ರಾಮಾಣಿಕ ಹಾಗೂ ನಿಸ್ವಾರ್ಥ ಸೇವಾ ಮನೋಭಾವದೊಂದಿಗೆ ಕಾರ್ಯವೆಸಗುತ್ತಿರುವ ತಮ್ಮ ಸಾಮಾಜಿಕ ಕಳಕಳಿ ಹಾಗೂ ಸಂಘಟನಾ ಸಾರ್ಮಥ್ಯವನ್ನು ಗುರತಿಸಿ ತಮ್ಮನ್ನು ಕಲಬರಗಿ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.ಇಂದಿನಿಂದ ತಾವೂ ಕಲಬುರಗಿ ಜಿಲ್ಲೆಯಾದ್ಯಂತ ಪಧಾಧಿಕಾರಿಗಳನ್ನು ಆಯ್ಕೆ ಮಾಡುವ ಅಧಿಕಾರ ಹೊಂದಿದ್ದು ಸಂಘಟನೆಗೆ ಸಕ್ರಿಯ ಹಾಗೂ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು ಎಂದು ಅವರು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
