ಇಂದಿರಾ ಲಂಕೇಶ್ ನಿಧನ
ಇಂದಿರಾ ಲಂಕೇಶ್ ನಿಧನ
ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ ಪುತ್ರಿ, ಚಲನಚಿತ್ರ ನಿರ್ದೇಶಕಿ ಕವಿತಾ ಲಂಕೇಶ್ ಅವರ ನಿವಾಸದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೃತರು ಪುತ್ರಿ ಕವಿತಾ ಲಂಕೇಶ್, ಪುತ್ರ ಇಂದ್ರಜಿತ್ ಲಂಕೇಶ್ ಸೇರಿದಂತೆ ಅಪಾರ ಬಂಧು-ಬಳಗ ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.
ನಾಳೆ ಅಂತ್ಯಕ್ರಿಯೆ ಇಂದಿರಾ ಲಂಕೇಶ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯು ಮಂಗಳವಾರ ಬೆಳಗ್ಗೆ ಚಾಮರಾಜಪೇಟೆಯಲ್ಲಿರುವ ಚಿತಾಗಾರ/ಸ್ಮಶಾನದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ
ಇಂದಿರಾ ಲಂಕೇಶ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ಸೂಚಿಸಿದ್ದಾರೆ:
