ಕಪನೂರಿನ ಸರಕಾರಿ ಶಾಲೆಯಲ್ಲಿ ದಾಖಲಾತಿ ಆಂದೋಲನ ಕಾರ್ಯಕ್ರಮ
ಕಪನೂರಿನ ಸರಕಾರಿ ಶಾಲೆಯಲ್ಲಿ ದಾಖಲಾತಿ ಆಂದೋಲನ ಕಾರ್ಯಕ್ರಮ
ಕಲಬುರಗಿ: ನಗರದ ಹೊರವಲಯದ ಕಪನೂರ ಸಿದ್ಧಾರೂಡ ಕಾಲೋನಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ದಾಖಲಾತಿ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಈ ಸಂದರ್ಭದಲ್ಲಿ ಶಾಲೆಯ ಪ್ರಭಾರಿ ಮುಖ್ಯ ಗುರುಗಳಾದ ಮೌನೇಶ ನಿಂಬಾಳ,ಸಹ ಶಿಕ್ಷಕಿಯರಾದ ಶ್ರೀಮತಿ ವಿಜಯಲಕ್ಷ್ಮೀ, ಕು.ಭಾಗ್ಯಶ್ರೀ,ಮತ್ತು ವಿದ್ಯಾರ್ಥಿಗಳ ಪಾಲಕರು, ಪೋಷಕರು ಹಾಗೂ ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು ಹಾಗೂ ಶಿಕ್ಷಣ ಪ್ರೇಮಿಗಳು ಮತ್ತು ಬಡಾವಣೆ ನಿವಾಸಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶ್ವಸಿಗೊಳಿಸಿದರು.
