ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಡೊನೇಷನ್: ಕ್ರಮಕ್ಕೆ ಕರವೇ ಆಗ್ರಹ

ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಡೊನೇಷನ್: ಕ್ರಮಕ್ಕೆ ಕರವೇ ಆಗ್ರಹ

ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಡೊನೇಷನ್: ಕ್ರಮಕ್ಕೆ ಕರವೇ ಆಗ್ರಹ

ಕಲಬುರಗಿ: ನಗರ ಹಾಗೂ ಗ್ರಾಮೀಣ ಭಾಗದಲ್ಲಿ ನಾಯಿ ಕೊಡೆಗಳಂತೆ ಹೆಮ್ಮರವಾಗಿ ಬೆಳೆದಿರುವ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿಯ ಡೊನೋಷನ್ ಹಾವಳಿಗೆ ಜನ ಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಮಿತಿ ಮೀರಿದ ಡೋನೇಷನ್ ಹಾವಳಿ ಕೂಡಲೇ ತಡೆಗಟ್ಟಬೇಕು ಎಂದು ಕರವೇ(ಪ್ರವೀಣ ಶೆಟ್ಟಿ) ಬಣದ ಕಲಬುರಗಿ ತಾಲೂಕು ಅಧ್ಯಕ್ಷ ವಿಜಯಕುಮಾರ ಅಂಕಲಗಿ ಅವರು ಆಗ್ರಹಿಸಿದ್ದಾರೆ.

  ‌‌‌‌‌‌‌‌‌ ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಜಿಲ್ಲೆ ಹಾಗೂ ತಾಲ್ಲೂಕಿನಾದ್ಯಂತ ಖಾಸಗಿ ಶಾಲೆಗಳಲ್ಲಿ ಡೋನೇಷನ್ ಹಾವಳಿ ಹೆಚ್ಚಾಗಿದೆ. ಜಿಲ್ಲಾ, ನಗರ ಹಾಗೂ ಗ್ರಾಮೀಣ ಪ್ರದೇಶ ಸೇರಿದಂತೆ ಖಾಸಗಿ ಶಿಕ್ಷಣ ಸಂಸ್ಥೆಗಳಿದ್ದು, ಒಂದೊಂದು ಶಿಕ್ಷಣ ಸಂಸ್ಥೆಗಳು ಒಂದೊಂದು ರೀತಿಯ ಶಿಕ್ಷಣ ಶುಲ್ಕ ಪಡೆಯುತ್ತಿವೆ. ಎಲ್‌ಕೆಜಿಯಿಂದ ಎಸ್‌ಎಸ್‌ಎಲ್‌ಸಿಯವರೆಗೂ ಕನಿಷ್ಠ ₹10 ಸಾವಿರದ ತನಕ ಗರಿಷ್ಠ ₹65 ಸಾವಿರ ಶಿಕ್ಷಣ ಶುಲ್ಕ ಪಡೆಯುತ್ತಿವೆ ಮತ್ತು ಪಠ್ಯ ಪುಸ್ತಕ, ಶಾಲಾ ಸಮವಸ್ತ್ರ, ಸ್ಕೂಲ್ ಬ್ಯಾಗ, ಶಾಲಾ ವಾಹನ ಇತರೆ ಶುಲ್ಕ ಸೇರಿದರೆ ಪ್ರತಿವರ್ಷ ₹30 ರಿಂದ ₹50 ಸಾವಿರ ಭರಿಸಬೇಕು. ಶಿಕ್ಷಣ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ಖಾಸಗಿ ಶಿಕ್ಷಣ ಸಂಸ್ಥೆಯವರು ಬಡ ವಿದ್ಯಾರ್ಥಿಗಳನ್ನು ಸುಲಿಗೆ ಮಾಡುತ್ತಿವೆ. ಈ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಶಿಕ್ಷಣ ಇಲಾಖೆ ಅಧಿಕಾರಿಗಳು ಕಾನೂನು ಕ್ರಮ ಕೈಕೊಳ್ಳದಿರುವುದು ಪಾಲಕರಿಗೆ ಅನ್ಯಾಯವಾಗುತ್ತಿದೆ ಎಂದರು.2026-27ನೇ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ನೀಡುವ ಪ್ರಕ್ರಿಯೆ ಖಾಸಗಿ ಶಿಕ್ಷಣ ಸಂಸ್ಥೆಗಳು ಆರಂಭಿಸಿವೆ. ಆರಂಭಿಕ ತರಗತಿಗೆ ಪ್ರವೇಶ ಪರೀಕ್ಷೆ ನಡೆಸಬಾರದು ಎಂದು 2009ರ ಶಿಕ್ಷಣ ಹಕ್ಕು ಕಾಯ್ದೆ ಸೆಕ್ಷನ್‌ 13(2)(ಬಿ) ಸ್ಪಷ್ಟವಾಗಿ ಹೇಳುತ್ತದೆ. ಒಂದು ವೇಳೆ ಪರೀಕ್ಷೆ ನಡೆಸಿದ್ದು ಕಂಡುಬಂದರೆ ₹25 ಸಾವಿರ ದಂಡ ವಿಧಿಸುವುದೂ ಸಹ ನಿಯಮದಲ್ಲಿದೆ.ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಹಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಹೊಸದಾಗಿ ಸ್ಥಾಪನೆಯಾಗುತ್ತಿವೆ. ಗುಣಮಟ್ಟದ ಶಿಕ್ಷಣ ನೀಡುವ ನೆಪದಲ್ಲಿ ಕೆಲ ಸಂಸ್ಥೆಗಳು ಹಣ ಮಾಡುವುದನ್ನೇ ದಂಧೆಯನ್ನಾಗಿಸಿಕೊಂಡಿವೆ. ಪೋಷಕರ ಬಳಿ ಮನಬಂದಂತೆ ಶುಲ್ಕ ವಸೂಲಿ ಮಾಡುತ್ತಿವೆ.ಹಗಲು ದರೋಡೆ ನಡೆಸುತ್ತಿವೆ ಎಂದು ಅವರು ದೂರಿದರು.

    ತಕ್ಷಣವೇ ಜಿಲ್ಲಾಡಳಿತ ನಿಯಮ ಮೀರಿ ಪೋಷಕರಿಂದ ಹಣ ಸುಲಿಗೆ ಮಾಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ದ ಕಠಿಣ ಕ್ರಮ ಜರಗಿಸಬೇಕು.ಬಡ ಹಾಗೂ ಮಧ್ಯಮ ವರ್ಗದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ‌ ಕಲ್ಪಿಸುವ ದಿಟ್ಟ ಕ್ರಮಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.