ವಿಧಾನ ಪರಿಷತ್‌ಗೆ ಆಯ್ಕೆಯಾದ ರಘು ಕೌಟಿಲ್ಯರಿಗೆ ದೇವೇಂದ್ರ ದೇಸಾಯಿ ಕಲ್ಲೂರ್ ಅಭಿನಂದನೆ

ವಿಧಾನ ಪರಿಷತ್‌ಗೆ ಆಯ್ಕೆಯಾದ ರಘು ಕೌಟಿಲ್ಯರಿಗೆ ದೇವೇಂದ್ರ ದೇಸಾಯಿ ಕಲ್ಲೂರ್ ಅಭಿನಂದನೆ

ವಿಧಾನ ಪರಿಷತ್‌ಗೆ ಆಯ್ಕೆಯಾದ ರಘು ಕೌಟಿಲ್ಯರಿಗೆ ದೇವೇಂದ್ರ ದೇಸಾಯಿ ಕಲ್ಲೂರ್ ಅಭಿನಂದನೆ

ಕಲಬುರಗಿ: ಕರ್ನಾಟಕ ವಿಧಾನ ಪರಿಷತ್‌ ಚುನಾವಣೆಯಲ್ಲಿ ಆಯ್ಕೆಯಾಗಿರುವ ಬಿಜೆಪಿ ಓಬಿಸಿ ರಾಜ್ಯಾಧ್ಯಕ್ಷರಾದ ಶ್ರೀ ರಘು ಕೌಟಿಲ್ಯ ಅವರಿಗೆ ಬಿಜೆಪಿ ಓಬಿಸಿ ನಗರಾಧ್ಯಕ್ಷರಾದ ಶ್ರೀ ದೇವೇಂದ್ರ ದೇಸಾಯಿ ಕಲ್ಲೂರ್ ಅವರು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ರಘು ಕೌಟಿಲ್ಯ ಅವರ ಆಯ್ಕೆಯು ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ತುಂಬಲಿದ್ದು, ಹಿಂದುಳಿದ ವರ್ಗಗಳ ಧ್ವನಿಯನ್ನು ಪರಿಣಾಮಕಾರಿಯಾಗಿ ಪ್ರತಿನಿಧಿಸುವಲ್ಲಿ ಅವರು ಯಶಸ್ವಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅವರ ನಾಯಕತ್ವ, ಸಂಘಟನಾ ಸಾಮರ್ಥ್ಯ ಹಾಗೂ ಸಮಾಜಮುಖಿ ಕಾರ್ಯಗಳ ಫಲವಾಗಿ ಈ ಗೌರವ ದೊರೆತಿದ್ದು, ವಿಧಾನ ಪರಿಷತ್ ಸದಸ್ಯರಾಗಿ ರಾಜ್ಯದ ಅಭಿವೃದ್ಧಿ ಹಾಗೂ ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಲಿದ್ದಾರೆ ಎಂದು ಹೇಳಿದರು.

ರಘು ಕೌಟಿಲ್ಯ ಅವರಿಗೆ ಮತ್ತೊಮ್ಮೆ ಶುಭ ಹಾರೈಸಿದ ದೇವೇಂದ್ರ ದೇಸಾಯಿ ಕಲ್ಲೂರ್ ಅವರು, ಅವರ ಅವಧಿಯಲ್ಲಿ ರಾಜ್ಯದ ಜನತೆಗೆ ಉತ್ತಮ ಸೇವೆ ದೊರೆಯಲಿ ಎಂದು ಆಶಿಸಿದರು.