ಯೋಗವು ಪ್ರಾಚೀನ ಭಾರತೀಯ ಸಂಪ್ರದಾಯದ ಅಮೂಲ್ಯ ಕೊಡುಗೆ -ಶಶೀಲ್ ಜಿ ನಮೋಶಿ
ಯೋಗವು ಪ್ರಾಚೀನ ಭಾರತೀಯ ಸಂಪ್ರದಾಯದ ಅಮೂಲ್ಯ ಕೊಡುಗೆ -ಶಶೀಲ್ ಜಿ ನಮೋಶಿ
ಕಲಬುರ್ಗಿ:ಯೋಗವು ಪ್ರಾಚೀನ ಭಾರತೀಯ ಸಂಪ್ರದಾಯದ ಒಂದು ಅಮೂಲ್ಯ ಕೊಡುಗೆಯಾಗಿದ್ದು, ಇದು ದೇಹ, ಮನಸ್ಸು ಮತ್ತು ಪ್ರಕೃತಿಯ ನಡುವೆ ಸಮತೋಲನವನ್ನು ಸಾಧಿಸಲು ಸಹಾಯ ಮಾಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯರು ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶಶೀಲ್ ಜಿ ನಮೋಶಿ ಹೇಳಿದರು.
ಅವರು ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಸ್ ನಿಜಲಿಂಗಪ್ಪ ದಂತ ಮಹಾವಿದ್ಯಾಲಯದಲ್ಲಿ ನಡೆದ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆ ,ಕೇಂದ್ರ ಸಂವಹನ ಇಲಾಖೆ (ವಾರ್ತಾ ಮತ್ತು ಪ್ರಸಾರ ಸಚಿವಾಲಯ), ಮಹಿಳಾ ಪತಂಜಲಿ ಯೋಗ ಸಮಿತಿ, ಭಾರತ ಸೆವಾದಳ ಜಿಲ್ಲಾ ಸಮಿತಿ ಕಲಬುರ್ಗಿ ಸಹಯೋಗದಲ್ಲ ನಡೆದ 12 ನೇಯ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ಯೋಗವು ಭಾರತವು ಜಗತ್ತಿಗೆ ನೀಡಿರುವ ಅತ್ಯಮೂಲ್ಯವಾದ ಮತ್ತು ಪ್ರಾಚೀನ ಕೊಡುಗೆಯಾಗಿದೆ. ಇದು ಕೇವಲ ದೈಹಿಕ ವ್ಯಾಯಾಮವಲ್ಲ, ಬದಲಿಗೆ ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವನ್ನು ಸಾಧಿಸುವ ಒಂದು ಜೀವನ ಪದ್ಧತಿಯಾಗಿದೆ ಎಂದು ಹೇಳಿದರು.
ಈ ಪ್ರಾಚೀನ ಭಾರತೀಯ ಸಂಪ್ರದಾಯವನ್ನು ಜಾಗತಿಕ ಮಟ್ಟದಲ್ಲಿ ಪಸರಿಸಲು ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ವಿಶ್ವ ಸಂಸ್ಥೆಗೆ ಪ್ರಸ್ತಾವನೆ ಸಲ್ಲಿಸಿದಾಗ ವಿಶ್ವಸಂಸ್ಥೆಯು 2014 ರಲ್ಲಿ ವಿಶ್ವ ಯೋಗ ದಿನಾಚರಣೆ ಘೋಷಣೆ ಮಾಡಿತು.ಮೊದಲ ಬಾರಿಗೆ 2015ರ ಜೂನ್ 21 ರಂದು ವಿಶ್ವದಾದ್ಯಂತ ಆಚರಿಸಲು ಪ್ರಾರಂಭವಾಯಿತು.
ಜೂನ್ 21 ರಂದೆ ಯೋಗ ದಿನಾಚರಣೆ ಮಾಡಲು ಕಾರಣ
ಜೂನ್ 21 ಉತ್ತರ ಗೋಳಾರ್ಧದಲ್ಲಿ ವರ್ಷದ ಅತಿ ಉದ್ದದ ದಿನವಾಗಿದ್ದು (ಸಮ್ಮರ್ ಸಾಲ್ಸ್ಟೈಸ್), ದೀರ್ಘಾಯುಷ್ಯ ಮತ್ತು ಆಧ್ಯಾತ್ಮಿಕ ಜಾಗೃತಿಯನ್ನು ಸಂಖೇತಿಸುತ್ತದೆ.
ವರ್ಷದ (2026) ವಿಶ್ವ ಯೋಗ ದಿನದ ಧ್ಯೇಯವಾಕ್ಯವು "ಆರೋಗ್ಯಕರ ವೃದ್ಧಿಗಾಗಿ ಯೋಗ" ಆಗಿದ್ದು ಇಂದಿನ ಕಲುಷಿತ ವಾತಾವರಣದಲ್ಲಿ ಪ್ರತಿಯೊಬ್ಬರು ತಮ್ಮ ಆರೋಗ್ಯ ರಕ್ಷಣೆಗಾಗಿ ಯೋಗ ಮುಖ್ಯವಾಗಿದೆ ಎಂದು ಹೇಳಿದರು, ಕೇವಲ ಇಂದು ಒಂದು ದಿನ ಯೋಗ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಟೋ ಹಾಕಿಕೊಂಡು ಪ್ರದರ್ಶನಕ್ಕಾಗಿ ಅಲ್ಲ ಎಂದು ಹೇಳಿದರು.
ಆಸನಗಳು ಮತ್ತು ಪ್ರಾಣಾಯಾಮಗಳು ದೇಹದ ನಮ್ಯತೆಯನ್ನು ಹೆಚ್ಚಿಸುತ್ತವೆ, ರಕ್ತಸಂಚಾರವನ್ನು ಸುಧಾರಿಸುತ್ತವೆ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸುತ್ತವೆ ಧ್ಯಾನ ಮತ್ತು ಉಸಿರಾಟದ ನಿಯಂತ್ರಣವು ಒತ್ತಡ, ಆತಂಕ ಮತ್ತು ಖಿನ್ನತೆಯನ್ನು ಕಡಿಮೆ ಮಾಡಿ, ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ಯೋಗಾಭ್ಯಾಸವು ದೇಹದ ಆಂತರಿಕ ಅಂಗಗಳು ಮತ್ತು ಗ್ರಂಥಿಗಳನ್ನು ಉತ್ತೇಜಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ದೈನಂದಿನ ಯೋಗಾಭ್ಯಾಸವು ಮನಸ್ಸನ್ನು ಶಾಂತಗೊಳಿಸಿ, ಉತ್ತಮ ನಿದ್ರೆಗೆ ಸಹಕಾರಿಯಾಗುತ್ತದೆ ಎಂದು ವೈದ್ಯಕೀಯ ವರದಿಯೇ ದೃಢಪಡಿಸಿದೆ ಎಂದು ಹೇಳಿದರು
ಮಹರ್ಷಿ ಪತಂಜಲಿಯವರ 'ಯೋಗ ಸೂತ್ರ'ಗಳು ಮತ್ತು ಅಷ್ಟಾಂಗ ಯೋಗವು ಮನುಷ್ಯನಿಗೆ ತನ್ನ ಭಾವನೆಗಳನ್ನು ನಿಯಂತ್ರಿಸಲು ಮತ್ತು ಅಧ್ಯಾತ್ಮಿಕ ಉನ್ನತಿಯನ್ನು ಸಾಧಿಸಲು ಮಾರ್ಗದರ್ಶನ ನೀಡುತ್ತವೆ. ಎಂದು ಹೇಳಿದರು.
ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ದಂತ ವೈದ್ಯಕಿಯ ಮಹಾವಿದ್ಯಾಲಯದ ಸಂಚಾಲಕರಾದ ಡಾ ಅನಿಲಕುಮಾರ ಪಟ್ಟಣ, ಸಂಸ್ಥೆಯ ಆಡಳಿತಾದಿಕಾರಿಗಳು ಕಾಲೇಜಿನ ಪ್ರಾಚಾರ್ಯರಾದ ಡಾ ಜಯಶ್ರೀ ಮುದ್ದಾ, ಉಪ ಪ್ರಾಚಾರ್ಯರಾದ ಡಾ ವೀರೆಂದ್ರ ಪಾಟೀಲ, ಸಂಸ್ಥೆಯ ಕ್ವಾಲಿಟಿ ಅಶೂರೆನ್ಸ ಶೆಲ್ ಮುಖ್ಯಸ್ಥೆ ಡಾ ಉಮಾ ರೇವೂರ, ಪತಂಜಲಿ ಯೋಗ ಸಮಿತಿಯ ಮಹಿಳಾ ವಿಭಾಗದ ಸುಮಂಗಲಾ, ಅನಿತಾ, ವೀರೆಶ, ಭಾರತೀಯ ಸೇವಾದಳದ ಜಿಲ್ಲಾ ಸಂಘಟಕ ಚಂದ್ರಶೇಖರ್ ಜಮಾದಾರ ವೇದಿಕೆಯ ಮೇಲೆ ಉಪಸ್ಥಿತರಿದ್ದರು ಡಾ ಸುರಭಿ ರಾಯರಾಮ ಕಾರ್ಯಕ್ರಮ ನಿರೂಪಿಸಿದರು
ಯೋಗ ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯಸ್ಥರು , ಪ್ರಾಚಾರ್ಯರು ಉಪನ್ಯಾಸಕರು ಭಾಗವಹಿಸಿದ್ದರು,
