ದರ್ಶನಾಪುರ ಅವರಿಗೆ ಸಚಿವ ಸ್ಥಾನ ನೀಡಿ - ಚಂದಣ್ಣ ಸೇರಿ ಒತ್ತಾಯ.

ದರ್ಶನಾಪುರ ಅವರಿಗೆ ಸಚಿವ ಸ್ಥಾನ ನೀಡಿ - ಚಂದಣ್ಣ ಸೇರಿ ಒತ್ತಾಯ.

ದರ್ಶನಾಪುರ ಅವರಿಗೆ ಸಚಿವ ಸ್ಥಾನ ನೀಡಿ - ಚಂದಣ್ಣ ಸೇರಿ ಒತ್ತಾಯ.

ಶಹಾಪುರ : ಕಲ್ಯಾಣ ಕರ್ನಾಟಕದ ಪ್ರಭಾವಿ ರಾಜಕೀಯ ಮುಖಂಡರು ಹಾಗೂ ಯಾದಗಿರಿ ಜಿಲ್ಲೆಯಲ್ಲಿಯೇ ಪ್ರಖ್ಯಾತಿಯನ್ನು ಪಡೆದ ಶಹಾಪುರ ವಿಧಾನಸಭಾ ಕ್ಷೇತ್ರದ ಕ್ರಿಯಾಶೀಲ ಶಾಸಕರಾದ

ಶರಣಬಸಪ್ಪಗೌಡ ದರ್ಶನಾಪುರ ಅವರಗೆ ಸಚಿವ ಸ್ಥಾನ ನೀಡಬೇಕೆಂದು ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಚಂದಣ್ಣ ಸೇರಿ ಸಗರ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರಿಗೆ ಒತ್ತಾಯಿಸಿದ್ದಾರೆ.

ಸದಾ ಹಗಲಿರುಳು ಮತ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ,ಶಾಸಕ ದರ್ಶನಾಪೂರ ಅವರು ಸುಮಾರು ಐದು ಬಾರಿ ಶಾಸಕರಾಗಿ ಆಯ್ಕೆಯಾಗಿ ಮೂರು ಬಾರಿ ಸಚಿವರಾಗಿ ಸಾಕಷ್ಟು ಈ ಭಾಗವನ್ನು ಅಭಿವೃದ್ಧಿಪಡಿಸುವುದರ ಜೊತೆಗೆ ಹೆಚ್ಚಿನ ಅನುಭವವನ್ನು ಪಡೆದಿದ್ದಾರೆ,ಹಿರಿತನದ ಆಧಾರದ ಮೇಲೆ ಇವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಈ ಸಂದರ್ಭದಲ್ಲಿ ಹೇಳಿದರು.

ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಮಾಡುವುದರ ಜೊತೆಗೆ ಈ ಭಾಗದಲ್ಲಿ ತಳಮಟ್ಟದಿಂದ ಕಾಂಗ್ರೆಸ್ ಪಕ್ಷ ಸಂಘಟಿಸುವಲ್ಲಿ ಇವರ ಕೊಡುಗೆ ಮಹತ್ವದ್ದಾಗಿದೆ.

ಇವರಿಗೆ ಸಚಿವ ಸ್ಥಾನ ನೀಡುವುದರಿಂದ ಮತ್ತಷ್ಟು ಕಾಂಗ್ರೆಸ್ ಪಕ್ಷ ಸಂಘಟಿಸುವುದರ ಜೊತೆಗೆ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ನುಡಿದರು.