ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ - ಡಾ.ವಸುಧಾ ಕಟ್ಟಿ
ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ - ಡಾ.ವಸುಧಾ ಕಟ್ಟಿ
ಶಹಾಪುರ: ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಪೋಷಕರ ಪಾತ್ರ ಬಹಳ ಪ್ರಮುಖವಾಗಿದ್ದು ಇದು ವರ್ಷದೊಳಗಿನ ಪ್ರತಿಯೊಂದು ಮಗುವಿಗೆ ತಪ್ಪದೆ ಪೋಲಿಯೋ ಲಸಿಕೆ ಹಾಕಿಸುವುದು ಪೋಷಕರ ಆದ್ಯ ಕರ್ತವ್ಯ ಎಂದು ಆಡಳಿತ ವೈದ್ಯಾಧಿಕಾರಿ ಡಾ. ವಸುಧಾ ಕಟ್ಟಿ ಹೇಳಿದರು.
ತಾಲೂಕಿನ ವನದುರ್ಗ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಪೋಲಿಯೋ ಮಕ್ಕಳಲ್ಲಿ ಶಾಶ್ವತ ಅಂಗವೈಕಲ್ಯ ಉಂಟುಮಾಡುವ ಸಾಧ್ಯತೆ ಇದ್ದು . ಆದರೆ ಸಮಯಕ್ಕೆ ಸರಿಯಾಗಿ ಪೋಲಿಯೋ ಹನಿ ಲಸಿಕೆ ನೀಡುವುದರಿಂದ ಈ ರೋಗವನ್ನು ಸಂಪೂರ್ಣವಾಗಿ ತಡೆಗಟ್ಟಬಹುದು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಲಸಿಕೆ ಸಂಪೂರ್ಣ ಸುರಕ್ಷಿತವಾಗಿದ್ದು,ಮಕ್ಕಳ ಆರೋಗ್ಯಕರ ಮತ್ತು ಉಜ್ವಲ ಭವಿಷ್ಯಕ್ಕಾಗಿ ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳನ್ನು ಸಮೀಪದ ಲಸಿಕಾ ಕೇಂದ್ರಗಳಿಗೆ ಕರೆತಂದು ಲಸಿಕೆ ಹಾಕಿಸಬೇಕು ಎಂದು ಸಲಹೆ ನೀಡಿದರು.ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಮಲ್ಲೇಶ ಕುರಕುಂದ ಮಾತನಾಡಿ ಆರೋಗ್ಯ ಇಲಾಖೆಯ ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡಿ ಲಸಿಕೆ ಪಡೆಯದೇ ಉಳಿದ ಮಕ್ಕಳಿಗೆ ಪತ್ತೆ ಹಚ್ಚಿ ಪೋಲಿಯೋ ಲಸಿಕೆ ನೀಡಲಿದ್ದು,ಈ ಕಾರ್ಯಕ್ಕೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಷಣ್ಮುಖ ಹೊಸಳ್ಳಿ,ವಿಶ್ವರಾಧ್ಯ ಬೆಲ್ಲೂರು,ಲ್ಯಾಬ್ ಟೆಕ್ನಿಷಿಯನ್ ಸುನೀಲ್ ತಿವಾರಿ,ನರ್ಸಿಂಗ್ ಅಧಿಕಾರಿ ವಿದ್ಯಾಶ್ರೀ,ಆಶಾ ಕಾರ್ಯಕರ್ತೆಯರು,ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.
