ಕಾಡಾ ಅಧ್ಯಕ್ಷ ಡಾ.ಎಂ.ಎ. ರಶೀದ ಮರ್ಚೆಂಟ್ ಪೋಲಿಯೋ ಲಸಿಕೆ ಚಾಲನೆ..

ಕಾಡಾ ಅಧ್ಯಕ್ಷ ಡಾ.ಎಂ.ಎ. ರಶೀದ ಮರ್ಚೆಂಟ್ ಪೋಲಿಯೋ ಲಸಿಕೆ ಚಾಲನೆ..

ಕಾಡಾ ಅಧ್ಯಕ್ಷ ಡಾ.ಎಂ.ಎ. ರಶೀದ ಮರ್ಚೆಂಟ್ ಪೋಲಿಯೋ ಲಸಿಕೆ ಚಾಲನೆ

ನಾಗರಾಜ್ ದಂಡಾವತಿ ವರದಿ ಶಹಾಬಾದ: ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಅಂಗವಾಗಿ ಪೋಲಿಯೊ ಮುಕ್ತ ಭಾರತ, ಪೋಲಿಯೋ ಮುಕ್ತ ಶಾಲೆಗಳು ಎಂಬ ಧೈಯದೊಂದಿಗೆ ಶಹಾಬಾದನಲ್ಲಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಲಬುರ್ಗಿ, ಸಮುದಾಯ ಆರೋಗ್ಯ ಕೇಂದ್ರ ಶಹಾಬಾದ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಶಹಾಬಾದ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಸರ್ಕಾರದ ಕಾಡಾ ಅಧ್ಯಕ್ಷ ಡಾ.ಎಂ.ಎ. ರಶೀದ ಮರ್ಚೆಂಟ್, ದೇಶವನ್ನು ಸಂಪೂರ್ಣ ಪೋಲಿಯೋ ಮುಕ್ತವಾಗಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಮೇಲಿದೆ, 5 ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತವಾಗದಂತೆ ಪೋಷಕರು ಹಾಗೂ ಸಾರ್ವಜನಿಕರು ಜಾಗೃತರಾಗಬೇಕು ಎಂದು ಕರೆ ನೀಡಿದರು.

ವೈದ್ಯಾಧಿಕಾರಿ ಡಾ.ಶಂಕರ್ ರಾಥೋಡ, ಶಹಾಬಾದ್ ನಗರ ವ್ಯಾಪ್ತಿಯಲ್ಲಿ ಸುಮಾರು 9,832 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ನೀಡುವ ಗುರಿಯನ್ನು ಹೊಂದಿದ್ದು, ಪ್ರತಿಯೊಬ್ಬ ಮಗುವಿಗೂ ಲಸಿಕೆ ತಲುಪಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ ಎಂದು ತಿಳಿಸಿದ ಡಾ.ಸಂತೋಷ ಪಾಟೀಲ, ಡಾ.ಶ್ರೀನಿವಾಸ್, ಫಿಜಿಷಿಯನ್ ಡಾ.ವೈಭವ, ರೇಡಿಯಾಲಜಿಸ್ ಡಾ.ಇಮ್ಮಿಯಾಜ್, ಎನ್‌ಸಿಡಿ ವೈದ್ಯಾಧಿಕಾರಿ ಡಾ.ಶ್ವೇತಾ, ಡಾ.ಜಮೀಲ್ ಬೇಗ್, ಯೂಸುಫ್ ಸಾಬ್ ನಾಕೇದಾರ, ಅಮರೇಶ್ ಇಟಗಿಕರ, ಶೇಖ್ ಜವೇರಿಯಾ, ಶರಣು ಮಡಿವಾಳ, ಶಂಕರ ವಾಲಿಕರ ಹಾಗೂ ಪದ್ಮಾವತಿ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.