ಸಾಮಾಜಿಕ ಜಿಲ್ಲಾ ಸಂಯೋಜಕರಾಗಿ ನಾಲವಾರಕರ್ ನೇಮಕ

ಸಾಮಾಜಿಕ ಜಿಲ್ಲಾ ಸಂಯೋಜಕರಾಗಿ ನಾಲವಾರಕರ್ ನೇಮಕ

ಸಾಮಾಜಿಕ ಜಿಲ್ಲಾ ಸಂಯೋಜಕರಾಗಿ ನಾಲವಾರಕರ್ ನೇಮಕ

ಕಲಬುರಗಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಕಲಬುರಗಿ ಜಿಲ್ಲೆಯ ಸಾಮಾಜಿಕ ಜಾಲತಾಣದ ಜಿಲ್ಲಾ ಸಂಯೋಜಕರನ್ನಾಗಿ ಮಂಜುನಾಥ ನಾಲವಾರಕರ್ ಅವರನ್ನು ನೇಮಿಸಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ವಿನಯಕುಮಾರ ಸೊರಕೆ ಅವರು ತಿಳಿಸಿದ್ದಾರೆ.

                ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,

ತಾವುಗಳು ಕೂಡಲೇ ತಮಗೆ ನೀಡಿರುವ ಜವಾಬ್ದಾರಿಯನ್ನು ವಹಿಸಕೊಂಡು,ಕೆಪಿಸಿಸಿ ಪ್ರಚಾರ ಸಮಿತಿಯ ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ವ್ಯಾಪಕವಾಗಿ ಪ್ರಚಾರ ಸಿಗುವಂತೆ ಮಾಡಲು ಕಾರ್ಯೋನ್ಮುಖರಾಗುವುದು ಹಾಗೂ ಈ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣ, ಜಿಲ್ಲಾ/ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಪಂಚಾಯತ್ ಸಮಿತಿಯ ಮೂಲಕ, ಸ್ಥಳೀಯ ಮುಖಂಡರುಗಳ ಸಹಕಾರದೊಂದಿಗೆ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಸಕ್ರಿಯವಾಗಿ ಸಹಕರಿಸಬೇಕೆಂದು ಅವರು ಕೋರಿದ್ದಾರೆ.