ಹಲಕರ್ಟಿ ರಸ್ತೆ ತಿರುವು ಅವೈಜ್ಞಾನಿಕ: ತಕ್ಷಣ ಕ್ರಮಕ್ಕೆ ವೀರಣ್ಣ ಯಾರಿ ಆಗ್ರಹ

ಹಲಕರ್ಟಿ ರಸ್ತೆ ತಿರುವು ಅವೈಜ್ಞಾನಿಕ: ತಕ್ಷಣ ಕ್ರಮಕ್ಕೆ ವೀರಣ್ಣ ಯಾರಿ ಆಗ್ರಹ

ಹಲಕರ್ಟಿ ರಸ್ತೆ ತಿರುವು ಅವೈಜ್ಞಾನಿಕ: ತಕ್ಷಣ ಕ್ರಮಕ್ಕೆ ವೀರಣ್ಣ ಯಾರಿ ಆಗ್ರಹ

ವಾಡಿ: ಕಲಬುರಗಿಯಿಂದ ಯಾದಗಿರಿಗೆ ತೆರಳುತ್ತಿದ್ದ ಪ್ರಯಾಣಿಕರ ಬಸ್ ಹಲಕರ್ಟಿ ಸಮೀಪದ ಅವೈಜ್ಞಾನಿಕ ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಉರುಳಿ ಕಂದಕ್ಕೆ ಜಾರಿದ ಘಟನೆ ನಡೆದಿದೆ. ಅದೃಷ್ಟವಶಾತ ಬಸ್‌ನಲ್ಲಿದ್ದ ಪ್ರಯಾಣಿಕರು, ಚಾಲಕ ಹಾಗೂ ನಿರ್ವಾಹಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

ಹಲಕರ್ಟಿ ಸಮೀಪದ ಈ ರಸ್ತೆ ತಿರುವು ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿರುವ ಕಾರಣ ಇಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ. ಈ ಬಾರಿ ದೊಡ್ಡ ಅನಾಹುತ ತಪ್ಪಿದರೂ, ಭವಿಷ್ಯದಲ್ಲಿ ಭೀಕರ ದುರಂತ ಸಂಭವಿಸುವ ಸಾಧ್ಯತೆ ಇರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ ರಸ್ತೆ ತಿರುವನ್ನು ವೈಜ್ಞಾನಿಕವಾಗಿ ಮರುನಿರ್ಮಾಣ ಮಾಡಬೇಕು ಎಂದು ಬಿಜೆಪಿ ವಾಡಿ ಅಧ್ಯಕ್ಷ ವೀರಣ್ಣ ಯಾರಿ ಆಗ್ರಹಿಸಿದ್ದಾರೆ.

ಅಪಘಾತಗಳು ನಿರಂತರವಾಗಿ ನಡೆಯುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಯ ಪರಿಹಾರಕ್ಕೆ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿರುವುದು ವಿಷಾದನೀಯ. ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಸ್ಥಳೀಯರೊಂದಿಗೆ ಹೋರಾಟ ನಡೆಸಬೇಕಾಗುತ್ತದೆ ಎಂದು ವೀರಣ್ಣ ಯಾರಿ ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.