ಶ್ರೀ ಕೃಷ್ಣ ಪದವಿ ಕಾಲೇಜಿನಲ್ಲಿ 2026–27ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ ಸಮಾರಂಭ
ಶ್ರೀ ಕೃಷ್ಣ ಪದವಿ ಕಾಲೇಜಿನಲ್ಲಿ 2026–27ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ ಸಮಾರಂಭ
ಬೆಂಗಳೂರು, ಜುಲೈ 6: ಶ್ರೀ ಕೃಷ್ಣ ಪದವಿ ಕಾಲೇಜಿನ ವತಿಯಿಂದ 2026–27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭವನ್ನು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಬಿ. ರಮೇಶ್ ಅವರು ಆಗಮಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾರ್ಗದರ್ಶನ ನೀಡಿದರು. ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ಎಂ. ರುಕ್ಮಾಂಗದ ನಾಯ್ಡು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಡಾ. ಮನಮೋಹನ್ ಸಿಂಗ್, ಸ್ನಾತಕೋತ್ತರ ಪದವಿ ಕೇಂದ್ರದ ನಿರ್ದೇಶಕರಾದ ಪ್ರೊ. ವೇಣುಗೋಪಾಲ್, ಸ್ನಾತಕೋತ್ತರ ಪದವಿ ಕೇಂದ್ರ ವಿಭಾಗದ ಪ್ರಾಂಶುಪಾಲರಾದ ಡಾ. ಕಮಲಸುಗಂಧಿ, ಶೈಕ್ಷಣಿಕ ನಿರ್ದೇಶಕರಾದ ಪ್ರೊ. ಮನೋಹರ್, ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಉಷಾ ಕುಮಾರಿ, ಸಂಜೆ ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ಸೇರಿದಂತೆ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಮುಖ್ಯ ಅತಿಥಿಗಳಾಗಿ ಮಾತನಾಡಿದ ಕುಲಪತಿ ಪ್ರೊ. ಬಿ. ರಮೇಶ್ ಅವರು, ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕಾಗಿ ಭಾಷಾ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಹಾಗೂ ಶಿಕ್ಷಣದ ಮೂಲಕ ರಾಷ್ಟ್ರ ನಿರ್ಮಾಣದ ಪ್ರಕ್ರಿಯೆಯಲ್ಲಿ ಯುವಜನರನ್ನು ತೊಡಗಿಸಿಕೊಳ್ಳುವಂತೆ ಮಾಡುತ್ತಿರುವ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯವನ್ನು ಶ್ಲಾಘಿಸಿದರು.
ಅಧ್ಯಕ್ಷೀಯ ಭಾಷಣ ಮಾಡಿದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ಎಂ. ರುಕ್ಮಾಂಗದ ನಾಯ್ಡು ಅವರು, ಶಿಕ್ಷಣವು ಪ್ರತಿಯೊಬ್ಬ ವ್ಯಕ್ತಿಯ ಬದುಕಿನ ಮೂಲಾಧಾರವಾಗಿದ್ದು, ಉತ್ತಮ ಪ್ರಜೆ ಹಾಗೂ ಆದರ್ಶ ನಾಗರಿಕನಾಗಿ ರೂಪುಗೊಳ್ಳಲು ಶಿಕ್ಷಣವೇ ಪ್ರಮುಖ ಸಾಧನವಾಗಿದೆ ಎಂದು ಹೇಳಿದರು.
