ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತ ಸಂಘದ ಮನವಿ

ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತ ಸಂಘದ ಮನವಿ

ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತ ಸಂಘದ ಮನವಿ

ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸುವುದರ ಜೊತೆಗೆ ರೈತರ ಬೆಳೆವಿಮೆಯ 2ನೇ ಕಂತಿನ ಹಣವನ್ನು ತಕ್ಷಣವೇ ಅವರ ಖಾತೆಗಳಿಗೆ ಜಮಾ ಮಾಡಬೇಕು ಎಂದು ಕರ್ನಾಟಕ ರೈತ ಸಂಘ ಹಾಗೂ ಹಸಿರುಸೇನೆ 

ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

ಈ ಕುರಿತು ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮನವಿಗೆ ಕರ್ನಾಟಕ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾ ಅಧ್ಯಕ್ಷ ಚಂದ್ರಕಾಂತ ಪಿ. ಓಗೆ ನೇತೃತ್ವದಲ್ಲಿ ಸಲ್ಲಿಸಿರುವ ಮನವಿಯಲ್ಲಿ, ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದ ಕಾರಣ ಕೃಷಿ ಚಟುವಟಿಕೆಗಳು ಸಂಪೂರ್ಣ ಹಿನ್ನಡೆಯಾಗಿವೆ. ಬಿತ್ತನೆಗೆ ಅಗತ್ಯವಾದ ತೇವಾಂಶ ಇಲ್ಲದಿರುವುದರಿಂದ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ತೋಟಗಾರಿಕಾ ಬೆಳೆಗಳು ಒಣಗುತ್ತಿದ್ದು, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗಿದೆ ಎಂದು ವಿವರಿಸಲಾಗಿದೆ.

ಪ್ರಸ್ತುತ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಜೊತೆಗೆ ರೈತರಿಗೆ ಬಾಕಿ ಇರುವ ಬೆಳೆವಿಮೆಯ 2ನೇ ಕಂತಿನ ಹಣವನ್ನು ಶೀಘ್ರವಾಗಿ ಬಿಡುಗಡೆ ಮಾಡಿ ಅವರ ಖಾತೆಗಳಿಗೆ ಜಮಾ ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಇದೇ ವೇಳೆ ರೈತರ ಮೇಲಿರುವ ಸಾಲದ ಭಾರವನ್ನು ಕಡಿಮೆ ಮಾಡಲು ಕೃಷಿ ಸಾಲ ಮನ್ನಾ ಮಾಡುವ ಕುರಿತೂ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಂಘದ ಮುಖಂಡರು ಒತ್ತಾಯಿಸಿದ್ದಾರೆ.

 ಕಲ್ಯಾಣ ಕರ್ನಾಟಕ ಅಧ್ಯಕ್ಷ ಮಲ್ಲಿಕಾರ್ಜುನ ಗಂವ್ಹಾರ, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಇಂದುಬಾಯಿ ಬನಶೆಟ್ಟಿ, ಸುಧಾಕರ್ ಇಟಗಿ, ವೀರೇಶ ಜಾಧವ, ಮಲ್ಲಿಕಾರ್ಜುನ ಜಾನೆ, ಮಾಳಮ್ಮ ಕವಲಗಾ, ನಾಗಮ್ಮ ಬಬಲಾದ, ಕಾವೇರಿ ಸಿಂಧೆ ಹಾಗೂ ಶರಣಬಸಪ್ಪ ವೈಜಾಪೂರ ಸೇರಿದಂತೆ ಹಲವರು ಬೆಂಬಲ ವ್ಯಕ್ತಪಡಿಸಿದ್ದಾರೆ.