ಕಲ್ಯಾಣ ಕರ್ನಾಟಕವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ; ರೈತರಿಗೆ ಎಕರೆಗೆ ₹50,000 ಪರಿಹಾರ ನೀಡಲು ರಾಷ್ಟ್ರೀಯ ಸಮಾಜ ಪಕ್ಷ ಆಗ್ರಹ

ಕಲ್ಯಾಣ ಕರ್ನಾಟಕವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ; ರೈತರಿಗೆ ಎಕರೆಗೆ ₹50,000 ಪರಿಹಾರ ನೀಡಲು ರಾಷ್ಟ್ರೀಯ ಸಮಾಜ ಪಕ್ಷ ಆಗ್ರಹ

ಕಲ್ಯಾಣ ಕರ್ನಾಟಕವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ; ರೈತರಿಗೆ ಎಕರೆಗೆ ₹50,000 ಪರಿಹಾರ ನೀಡಲು ರಾಷ್ಟ್ರೀಯ ಸಮಾಜ ಪಕ್ಷ ಆಗ್ರಹ

ಕಲಬುರ್ಗಿ, ಜುಲೈ 7: ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆಗಾಲ ಆರಂಭವಾಗಿ ಒಂದು ತಿಂಗಳು ಕಳೆದಿದ್ದರೂ ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ತಕ್ಷಣ ಕಲ್ಯಾಣ ಕರ್ನಾಟಕ ಭಾಗವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕೆಂದು ರಾಷ್ಟ್ರೀಯ ಸಮಾಜ ಪಕ್ಷದ ರಾಜ್ಯ ಯುವ ಘಟಕ ಅಧ್ಯಕ್ಷ ಶ್ರೀ ದೇವೆಂದ್ರ ಕೆ ಚಿಗರಹಳ್ಳಿ ಆಗ್ರಹಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿರುವ ಪಕ್ಷವು, ಮಳೆಯ ಕೊರತೆಯಿಂದ ಬಿತ್ತನೆ ಮಾಡಿದ ಬೀಜಗಳು ಒಣಗಿ ನಾಶವಾಗುತ್ತಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ ಚಟುವಟಿಕೆಗಳು ಸಂಪೂರ್ಣ ಅಸ್ತವ್ಯಸ್ತಗೊಂಡಿರುವ ಕಾರಣ ಸರ್ಕಾರವು ತಕ್ಷಣ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಿ ರೈತರ ನೆರವಿಗೆ ಬರಬೇಕೆಂದು ಒತ್ತಾಯಿಸಿದೆ.

ಪಕ್ಷವು ಸರ್ಕಾರದ ಮುಂದೆ ಪ್ರಮುಖವಾಗಿ ಈ ಬೇಡಿಕೆಗಳನ್ನು ಮುಂದಿಟ್ಟಿದೆ: ಕಲ್ಯಾಣ ಕರ್ನಾಟಕ ಭಾಗವನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವುದು, ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪ್ರತಿ ಎಕರೆಗೆ ₹50,000 ಪರಿಹಾರ ನೀಡುವುದು, ಪ್ರತಿಯೊಬ್ಬ ರೈತ ಕುಟುಂಬಕ್ಕೆ ₹10,000 ವಿಶೇಷ ತುರ್ತು ನೆರವು ಒದಗಿಸುವುದು, ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವುದು, ಬೆಳೆಸಾಲ ವಸೂಲಾತಿಯನ್ನು ಮುಂದೂಡಿ ಬಡ್ಡಿ ಮನ್ನಾ ನೀಡುವುದು, ರೈತರಿಗೆ ಉಚಿತ ಮೇವು, ಕುಡಿಯುವ ನೀರು ಹಾಗೂ ಅಗತ್ಯ ಕೃಷಿ ಸಹಾಯ ಒದಗಿಸುವುದು ಮತ್ತು ಬೆಳೆ ವಿಮೆ ಪರಿಹಾರವನ್ನು ತ್ವರಿತವಾಗಿ ವಿತರಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡುವುದು.

ರಾಜ್ಯದ ಅನ್ನದಾತರನ್ನು ಸಂಕಷ್ಟದಿಂದ ಪಾರು ಮಾಡಲು ಸರ್ಕಾರವು ಮಾನವೀಯ ಹಾಗೂ ರೈತಪರ ದೃಷ್ಟಿಕೋನದಿಂದ ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ತಕ್ಷಣ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಷ್ಟ್ರೀಯ ಸಮಾಜ ಪಕ್ಷ (RSP) ಕರ್ನಾಟಕ ರಾಜ್ಯ ಯುವ ಘಟಕದ ಅಧ್ಯಕ್ಷ ಶ್ರೀ ದೇವೆಂದ್ರ ಕೆ ಚಿಗರಹಳ್ಳಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ 

ರಾಜ್ಯ ಪ್ರಧಾನ ಕಾರ್ಯದರ್ಶಿ ಶರಣಬಸಪ್ಪ ದೊಡ್ಡಮನಿ, ಕಲ್ಬುರ್ಗಿ ಜಿಲ್ಲಾ ಅಧ್ಯಕ್ಷ ಶ್ರೀಮಂತ ಮಾವನೂರ್, ಚಂದ್ರಕಾಂತ್ ಗಂವ್ಹರ ರಾಜ್ಯ ಯುವ ಸಂಚಾಲಕರು, ರವಿ ಡೊಂಗರಗಾವ್ ಜಿಲ್ಲಾ ಸಂಚಾಲಕರು ಸೇರಿದಂತೆ ಅನೇಕ ಪಕ್ಷದ ಮುಖಂಡರು ಇದ್ದರು