ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ನೀಡುವಂತೆ ಸಿಎಂ ಅವರಿಗೆ ಮನವಿ
ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ನೀಡುವಂತೆ ಸಿಎಂ ಅವರಿಗೆ ಮನವಿ
ಕಲಬುರಗಿ : ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಅಖಿಲ ಭಾರತ ಹಿಂದೂ ಗಾಣಿಗರ ಸಂಘ ವತಿಯಿಂದ ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಮನವಿಯಲ್ಲಿ, ಕರ್ನಾಟಕದಲ್ಲಿ ಗಾಣಿಗ ಸಮಾಜವು ಸುಮಾರು ೪೦ ರಿಂದ ೪೫ ಲಕ್ಷ ಜನಸಂಖ್ಯೆಯನ್ನು ಹೊಂದಿದ್ದು, ಸ್ವಾತಂತ್ರ‍್ಯಾನAತರದಿAದಲೂ ಕಾಂಗ್ರೆಸ್ ಪಕ್ಷದ ಬೆಳವಣಿಗೆ ಮತ್ತು ಸರ್ಕಾರ ರಚನೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಾ ಬಂದಿದೆ ಎಂದು ತಿಳಿಸಿದೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮವಹಿಸಿದ್ದು, ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬಲವರ್ಧನೆಗೆ ಕಾರಣರಾಗಿದ್ದಾರೆ. ಹಾಗೆಯೇ ೨೦೨೪ರ ಲೋಕಸಭಾ ಚುನಾವಣೆಯಲ್ಲೂ ಸಮಾಜವನ್ನು ಒಗ್ಗೂಡಿಸಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿ ಗಮನಾರ್ಹ ಕೊಡುಗೆ ನೀಡಿದ್ದಾರೆ ಎಂದು ಸಂಘ ಪ್ರಶಂಸಿಸಿದೆ.
ಇAತಹ ಸೇವೆ ಸಲ್ಲಿಸಿದ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡದಿರುವುದು ಗಾಣಿಗ ಸಮಾಜಕ್ಕೆ ನೋವುಂಟು ಮಾಡಿದ್ದು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕವೂ ಸಮಾಜಕ್ಕೆ ಸಚಿವ ಸಂಪುಟದಲ್ಲಿ ಯಾವುದೇ ಪ್ರಾತಿನಿಧ್ಯ ದೊರಕಿಲ್ಲ ಎಂದು ಮನವಿಯಲ್ಲಿ ಅಸಮಾಧಾನ ವ್ಯಕ್ತಪಡಿಸಲಾಗಿದೆ.
ಹಿಂದಿನ ಬಿಜೆಪಿ ಸರ್ಕಾರದಲ್ಲಿ ಗಾಣಿಗ ಸಮಾಜದ ನಾಯಕರಿಗೆ ಸಚಿವ ಸ್ಥಾನ ಹಾಗೂ ಲಕ್ಷ್ಮಣ ಸವದಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿತ್ತು. ಆದರೆ ಪ್ರಸ್ತುತ ಕಾಂಗ್ರೆಸ್ ಸರ್ಕಾರದಲ್ಲಿ ಸಮಾಜಕ್ಕೆ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ ಎಂದು ಸಂಘ ತಿಳಿಸಿದೆ.
ಆದ್ದರಿಂದ ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಗಾಣಿಗ ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದು ಅಖಿಲ ಭಾರತ ಹಿಂದೂ ಗಾಣಿಗರ ಸಂಘದ ಅಧ್ಯಕ್ಷ ಸಂಗನಗೌಡ ಪಾಟೀಲ ಕಲ್ಲೂರು ಹಾಗೂ ಕಾರ್ಯದರ್ಶಿ ಬಿ.ಎಚ್. ಚನ್ನಬಸಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಶರಣಕುಮಾರ ಬಿಲ್ಲಾಡ, ಸಂದೀಪ ದೇಸಾಯಿ, ಡಾ.ಬಸವರಾಜ ಅಂಗಡಿ, ಡಾ.ಗುರುಲಿಂಗಪ್ಪ ಎ.ಪಾಟೀಲ, ಶಂಕರಗೌಡ ಪಾಟೀಲ, ಸವಿತಾ ಸಜ್ಜನ್, ವೀರೇಶ ಕಲಶೇಟ್ಟಿ ಬೈರಾಮಡಗಿ ಸೇರಿದಂತೆ ಇತರರು ಇದ್ದರು.
