ರೈತ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಈಶ್ವರ್ ಮುಗುಳನಾಗಾಂವ ನೇಮಕ
ರೈತ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಈಶ್ವರ್ ಮುಗುಳನಾಗಾಂವ ನೇಮಕ
ನಾಗರಾಜ್ ದಂಡಾವತಿ ವರದಿ ಶಹಾಬಾದ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು
ಸೇನೆ (ಕೋಡಿಹಳ್ಳಿ ಚಂದ್ರಶೇಖರ್ ಬಣ) ಕಲಬುರಗಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಈಶ್ವರ್ ಮುಗುಳನಾಗಾಂವ ಮಾಲಗತ್ತಿ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಮಲ್ಲಣ್ಣಗೌಡ ಬಿ ಪಾಟೀಲ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಈ ಕೂಡಲೇ ತಮ್ಮ ಜವಾಬ್ದಾರಿಯನ್ನು ವಹಿಸಿಕೊಂಡು ಜಿಲ್ಲೆಯಲ್ಲಿ ರೈತಪರ ಹೋರಾಟಗಳನ್ನು ಹಮ್ಮಿಕೊಳ್ಳುವ ಮೂಲಕ ರೈತ ಸಂಘದ ಸಂಘಟನೆ ಮತ್ತಷ್ಟು ಬಲ ಪಡಿಸಬೇಕು ಎಂದು ಸೂಚಿಸಿದ್ದಾರೆ.
