ರಾಜ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ.
ರಾಜ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ (ರಿ.), ಬೆಂಗಳೂರು ವತಿಯಿಂದ ಆಯೋಜಿಸಲಾಗಿರುವ 4ನೇ ರಾಜ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ.
ಕಾರ್ಯಕ್ರಮದಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ್, ರಾಜ್ಯ ಉಪಾಧ್ಯಕ್ಷರಾದ ಡಾ. ಎಸ್. ಎಸ್. ಪಾಟೀಲ್, ಧಾರವಾಡ ಜಿಲ್ಲಾ ಅಧ್ಯಕ್ಷರಾದ ಸಂಗನಗೌಡ ಹೂವನ್ನವರ, ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರಾದ ಆರ್. ದ್ಯಾಮರಾಜು, ವಿವಿಧ ತಾಲೂಕು ಅಧ್ಯಕ್ಷರು ಹಾಗೂ ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದ ಪದಾಧಿಕಾರಿಗಳು ಭಾಗವಹಿಸಿ ರಾಜ್ಯ ಸಮ್ಮೇಳನ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ರಾಜ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಯಿತು. ರಾಜ್ಯದ ವಿವಿಧ ಜಿಲ್ಲೆಗಳ ಪತ್ರಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆ ಮುಖಂಡರು ಕರೆ ನೀಡಿದರು.
