KEA-ಸೆ.8 ,ರಿಂದ 2ನೇ ಸುತ್ತಿನ ಸೀಟು ಹಂಚಿಕೆ ಆರಂಭ || ಸಿಇಟಿ, ನೀಟ್

KEA-ಸೆ.8 ,ರಿಂದ 2ನೇ ಸುತ್ತಿನ ಸೀಟು ಹಂಚಿಕೆ ಆರಂಭ || ಸಿಇಟಿ, ನೀಟ್
ಬೆಂಗಳೂರು: ಸೆಪ್ಟೆಂಬರ, 8 ರಿಂದ ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ಮತ್ತು ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ನಾಳೆ ಬೆಳಿಗ್ಗೆ 11 ಗಂಟೆಗೆ ಹಂಚಿಕೆಗೆ ಲಭ್ಯ ಇರುವ ಸೀಟುಗಳ ವಿವರವನ್ನು ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 2ರಿಂದ ಸೆ.11ರವರೆಗೆ ‘ಆಯ್ಕೆ’ (Options) ಗಳನ್ನು ಬದಲಿಸಿಕೊಳ್ಳಲು ಅವಕಾಶ ಇರುತ್ತದೆ. ರಾಷ್ಟೀಯ ಮಟ್ಟದ ನೀಟ್ (NEET) ಫಲಿತಾಂಶ ನೋಡಿಕೊಂಡು ಎರಡನೇ ಸುತ್ತಿನ ಫಲಿತಾಂಶ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.