ಗುಲಬರ್ಗಾ ವಿಶ್ವವಿದ್ಯಾಲಯದ (ಗಳಂಗಳಪ್ಪ ಪಾಟೀಲ) ಎಸ್ ಬಿ ಪಾಟೀಲ ಬಸವಾದಿ ಶರಣ ಸಾಹಿತ್ಯ ಕೇಂದ್ರಕ್ಕೆ ಹೊಸ ನಿರ್ದೇಶಕರ ಹುದ್ದೆಗೆ ಮಲಶೆಟ್ಟಿ ನೇಮಕ
ಗುಲಬರ್ಗಾ ವಿಶ್ವವಿದ್ಯಾಲಯದ (ಗಳಂಗಳಪ್ಪ ಪಾಟೀಲ ) ಬಸವಾದಿ ಶರಣ ಸಾಹಿತ್ಯ ಕೇಂದ್ರಕ್ಕೆ ಹೊಸ ನಿರ್ದೇಶಕರ ಹುದ್ದೆಗೆ ಮಲಶೆಟ್ಟಿ ನೇಮಕ
ಕಲಬುರಗಿ, ಜು. 25: ಗುಲಬರ್ಗಾ ವಿಶ್ವವಿದ್ಯಾಲಯದ ಬಸವಾದಿ ಶರಣ ಸಾಹಿತ್ಯ ಕೇಂದ್ರದ ನಿರ್ದೇಶಕರಾಗಿ ಪ್ರೊ. ವಿಜಯಕುಮಾರ ಬಿ. ಮಲಶೆಟ್ಟಿ ಅವರನ್ನು ನೇಮಕ ಮಾಡಿ ವಿಶ್ವವಿದ್ಯಾಲಯ ಆದೇಶ ಹೊರಡಿಸಿದೆ.
ಬಸವಾದಿ ಶರಣ ಸಾಹಿತ್ಯ ಕೇಂದ್ರದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಭೌತಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಎಸ್.ಎಂ. ಹನಗೋಡಿಮಠ ಅವರು 2026ರ ಮೇ 31ರಂದು ವಯೋನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಈ ಹುದ್ದೆ ತೆರವಾಗಿತ್ತು. ತೆರವಾದ ಸ್ಥಾನಕ್ಕೆ ಹೊಸ ನಿರ್ದೇಶಕರನ್ನು ನೇಮಿಸುವಂತೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಮಾನ್ಯ ಕುಲಪತಿಗಳ ಅನುಮೋದನೆಯ ಮೇರೆಗೆ ಪ್ರಾಣಿಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ವಿಜಯಕುಮಾರ ಬಿ. ಮಲಶೆಟ್ಟಿ ಅವರನ್ನು ಬಸವಾದಿ ಶರಣ ಸಾಹಿತ್ಯ ಕೇಂದ್ರದ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದರು
ಈ ಕುರಿತು ವಿಶ್ವವಿದ್ಯಾಲಯದ ಆಡಳಿತ ವಿಭಾಗವು 2026-27ನೇ ಸಾಲಿನ ಆದೇಶ ಸಂಖ್ಯೆ 525, ದಿನಾಂಕ 22.07.2026ರ ಮೂಲಕ ಅಧಿಕೃತ ಆದೇಶ ಹೊರಡಿಸಿದೆ.
